ನರೇಗಾ ಯೋಜನೆ ಪಾರದರ್ಶಕವಾಗಿ ಅನುಷ್ಠಾನ ಮಾಡುವಲ್ಲಿ ಆಧಿಕಾರಿಗಳ ಪಾತ್ರ ಮಹತ್ವದ್ದು- ಮಲ್ಲಿಕಾರ್ಜುನ್
Role of officials is important in transparent implementation of Narega scheme - Mallikarjun
ನರೇಗಾ ಯೋಜನೆ ಪಾರದರ್ಶಕವಾಗಿ ಅನುಷ್ಠಾನ ಮಾಡುವಲ್ಲಿ ಆಧಿಕಾರಿಗಳ ಪಾತ್ರ ಮಹತ್ವದ್ದು- ಮಲ್ಲಿಕಾರ್ಜುನ್
ಬ್ಯಾಡಗಿ 30: ನರೇಗಾ ಯೋಜನೆ ಗ್ರಾಮೀಣ ಭಾಗದಲ್ಲಿ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಲ್ಲಿ ಮೇಟ್‌ಗಳ ಪಾತ್ರ ಬಹಳ ಮಹತ್ವದ್ದು ಎಂದು ಬ್ಯಾಡಗಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಸರ್‌ಕರೆ ನೀಡಿದರು ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಬ್ಯಾಡಗಿತಾಲೂಕ ಪಂಚಾಯಿತಿ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ಯ ಇಲಾಖೆ ಜಿಲ್ಲಾ ಪಂಚಾಯತ್ ಹಾವೇರಿ ತಾಲೂಕ ಪಂಚಾಯತ್ ಬ್ಯಾಡಗಿ ಹಾಗೂ ಗ್ರಾಮ ಸ್ವರಾಜ್ಯ ಅಭಿಯಾನ ಕರ್ನಾಟಕ ಮತ್ತು ವನಸಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಶ್ರಯದಲ್ಲಿ ತಾಲೂಕ ಮಟ್ಟದಕಾಯಕ ಬಂಧುಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ನರೇಗಾ ಯೋಜನೆ ಅಡಿ ಕಾಯಕ ಬಂಧುಗಳು ಸಮುದಾಯ ಹಾಗೂ ಗ್ರಾಮ ಪಂಚಾಯಿತಿಯ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಮೂರು ದಿನದ ತರಬೇತಿಯಲಿ ್ಲತಮ್ಮ ಕೆಲಸ ಕಾರ್ಯಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಕ್ಷೇತ್ರ ಭೇಟಿ ಮಾಡಿ ಕೂಲಿ ಕಾರ್ಮಿಕರೊಂದಿಗೆ ಅನುಭವ ಹಂಚಿಕೆ ಒಂದು ದಿನದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುವ ಅಳತೆ ಹಾಜರಾತಿ ದಾಖಲಾತಿ ನಿರ್ವಹಣೆ ಇತ್ಯಾದಿ ವಿಷಯಗಳನ್ನು ತಿಳಿಸಿ ಕೊಡಲಾಗುವುದು ಎಂದು ತಿಳಿಸಿದರು.
ವನಸಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಎಸ್ ಡಿ ಬಳೆಗಾರ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಪ್ರಾಸ್ತಾವಿಕ ನುಡಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಗ್ರಾಮ ಸ್ವರಾಜ್ ಅಭಿಯಾನದಡಿ ಒಡಂಬಡಿಕೆ ಮಾಡಿಕೊಂಡು ರಾಜ್ಯದಲ್ಲಿ 20 ಜಿಲ್ಲೆ 50 ತಾಲೂಕುಗಳಲ್ಲಿ ನರೇಗಾಯೋಜನೆ ಅಡಿ ಮೇಟ್ಸ್ ಗಳಿಗೆ ಯೋಜನೆ ಕುರಿತು ಮಾಹಿತಿ ನೀಡಿ ಸುಸ್ಥಿರ ಕೂಲಿ ಕಾರ್ಮಿಕರ ಸಂಘಟನೆ ಮಾಡುವುದರೊಂದಿಗೆ ದೀರ್ಘಕಾಲ ಆಸ್ತಿಗಳ ಸೃಜನೇ ಮಾಡುವುದು ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜ್ ಬಿದರಿ ದಾದಾಪೀರ್ ಫಕೀರಮ್ಮ ಶೃತಿ ಮತ್ತು ತಾಂತ್ರಿಕ ಸಂಯೋಜಕರಾದ ಸಂತೋಷ್‌ಕುಮಾರ್ ನಾಯಕ ಮತ್ತು ಬಿ ಎಫ್ ಟಿ ಗಳಾದ ಮಹೇಶ್ ಕುಪ್ಪೇಲೂರ್ ಕರೇಗೌಡ ಪುಟ್ಟನಗೌಡ್ರು ಉಪಸ್ಥಿತರಿದ್ದರು ತರಬೇತಿ ಕಾರ್ಯಕ್ರಮವನ್ನು ಐ ಇ ಸಿ ಸಂಯೋಜಕರಾದ ಅಕ್ಷಯ್ ದೇಶಪಾಂಡೆ ಮಂಜುನಾಥ್ ಬಿ ಬಿದರಿ ಸ್ವಾಗತಿಸಿದರು ಡಿಟಿಸಿ ರಾಜು ಪಳತಮನಿ ಭಾಗವಹಿಸಿದ್ದರು ಈ ತರಬೇತಿ ಕಾರ್ಯಕ್ರಮದಲ್ಲಿ ಸುಮಾರು 40 ಜನ ಮೇಟ್ಸ್ ಗಳು ಭಾಗವಹಿಸಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 