ಸದೃಢ ರಾಷ್ಟ್ರಕ್ಕೆ ವಿದ್ಯಾರ್ಥಿಗಳ ಪಾತ್ರ ಮುಖ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
Role of students is important for a strong nation: District Collector Prashant Kumar Mishra
ಸದೃಢ ರಾಷ್ಟ್ರಕ್ಕೆ ವಿದ್ಯಾರ್ಥಿಗಳ ಪಾತ್ರ ಮುಖ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ 06: ಸ್ಪರ್ಧಾತ್ಮಕ ಯುಗದಲ್ಲಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಬುಧವಾರದಂದು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಬಳ್ಳಾರಿ, ಉನ್ನತಿ ಫೌಂಡೇಶನ್ ಬೆಂಗಳೂರು, ಉದ್ಯೋಗ- ಕೌಶಲ್ಯ ಅಭಿವೃದ್ದಿ ಘಟಕ ಸಿಡಾಕ್ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿಗಳ ಶ್ರೇಯಸ್ಸಿಗಾಗಿ ಮುಂಜಾನೆಯ ಹಾಗೂ ಮುಸ್ಸಂಜೆಯ ಮಾತು ಮತ್ತು ಮಂಥನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ. ಸತತ ಪ್ರಯತ್ನ ಮತ್ತು ಗುಣಮಟ್ಟದ ವಿದ್ಯಾಭ್ಯಾಸದಿಂದ ವಿದ್ಯಾರ್ಥಿಗಳು ಯಶಸ್ಸು ಕಾಣಬಹುದು. ಉನ್ನತ ಸ್ಥಾನಮಾನದ ಉದ್ಯೋಗದ ಕನಸು ಹೊಂದಿರುವವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ಐಎಎಸ್, ಐಪಿಎಸ್ ಗಳಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಎಂದು ಮೂರು ಹಂತ ಇರುತ್ತವೆ. ವಿದ್ಯಾರ್ಥಿಗಳು ಸ್ವಯಂ ಪ್ರೇರಣೆ, ಸಾಫ್ಟ್ ಸ್ಕಿಲ್ ಕೌಶಲ್ಯ ಅಳವಡಿಸಿಕೊಂಡು ಯಶಸ್ಸು ಕಾಣಬಹುದು ಎಂದು ಹೇಳಿದರು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ನಿರ್ವಹಣೆ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಪಠ್ಯಕ್ರಮ ಅಧ್ಯಯನದ ಜೊತೆಗೆ ದಿನ-ಪತ್ರಿಕೆ ಓದುವ ಹವ್ಯಾಸ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ಪದವಿ ಹಂತದಲ್ಲಿ ಅನೇಕ ಹೊಸ ಕೋರ್ಸ್‌ಗಳನ್ನು ಆರಂಭಿಸಲು ವಿಶ್ವವಿದ್ಯಾಲಯವು ಮುನ್ನುಡಿ ಬರೆದಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅಭಿವೃದ್ದಿಪಡಿಸುವುದು ವಿವಿಯ ಗುರಿಯಾಗಿದೆ ಎಂದರು.
ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಾಣೇಶ್.ಎಸ್., ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 