ಸದೃಢ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಪ್ರಮುಖ: ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ
Role of young voters important in building a strong nation: Judge D.P. Kumaraswamy
ವಿಜಯನಗರ (ಹೊಸಪೇಟೆ) 27: ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಮತದಾನದ ಮೂಲಕ ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವ ಮತದಾರರ ಪಾತ್ರ ಅತ್ಯಂತ ದೊಡ್ಡದು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜವಾಬ್ದಾರಿಯುತ ಪ್ರಜೆಗಳಾದ ಯುವಕರು ಮತ್ತು ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವಾಗಿದ್ದು, ಸಂವಿಧಾನ ಮತ್ತು ದೇಶದ ಆಡಳಿತ ವ್ಯವಸ್ಥೆಯ ಬಗ್ಗೆ ಅರಿತುಕೊಳ್ಳಬೇಕು. ಚುನಾವಣೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಎಚ್ಚರಿಕೆ ವಹಿಸಿ ಹಣ ಅಥವಾ ಆಸೆ-ಆಮಿಷಗಳಿಗೆ ಒಳಗಾಗಿ ಮತ ಮಾರಿಕೊಳ್ಳುವುದು ಭ್ರಷ್ಟಾಚಾರಕ್ಕೆ ಸಮಾನ. ಇಂತಹ ನಡವಳಿಕೆಯಿಂದ ದೇಶದ ಏಳಿಗೆ ಅಸಾಧ್ಯ.
ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದಿರಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕಾದರೆ ಕಡ್ಡಾಯ ಮತದಾನ ಅಗತ್ಯ.
ನನ್ನ ಭಾರತ, ನನ್ನ ಮತ
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು, "2011 ರಿಂದ ಪ್ರತಿವರ್ಷ ಮತದಾರರ ದಿನವನ್ನು ಆಚರಿಸಲಾಗುತ್ತಿದ್ದು, ಈ ಬಾರಿ ’ನನ್ನ ಭಾರತ, ನನ್ನ ಮತ’ ಎಂಬ ಘೋಷವಾಕ್ಯದಡಿ ಅರಿವು ಮೂಡಿಸಲಾಗುತ್ತಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ಯುವಜನರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೆರೆ ದೇಶಗಳಿಗಿಂತ ಭಾರತದಲ್ಲಿ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯಿದ್ದು, ಇದರ ರಕ್ಷಣೆಗೆ ಯುವ ಸಮೂಹ ಸಕ್ರಿಯವಾಗಿ ಮತದಾನದಲ್ಲಿ ಭಾಗವಹಿಸಬೇಕು," ಎಂದು ತಿಳಿಸಿದರು.
ಪ್ರತಿಜ್ಞಾವಿಧಿ ಬೋಧನೆ:
ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಅವರು ನೆರೆದಿದ್ದವರಿಗೆ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಮತದಾರರ ದಿನಾಚರಣೆ ಅಂಗವಾಗಿ ಏರಿ್ಡಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಬೂತ್ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬಿ ಎಲ್ ಓ ಗಳಿಗೆ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಮ್ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ಪೌರಾಯುಕ್ತ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 