ಎಸ್‌ಎಸ್‌ಎಲ್ಸಿ ಮಕ್ಕಳ ಭವಿಷ್ಯಕ್ಕಾಗಿ ರೋಣ,ಗಜೇಂದ್ರಗಡ ತಾಪಂ ಮಹತ್ವದ ಹೆಜ್ಜೆ
Rona, Gajendragarh TAP is an important step for the future of SSLC children
ರೋಣ : ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿನ ಹಿತದೃಷ್ಟಿಯಿಂದ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಯಂಕಾಲ 7.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ಮೊಬೈಲ್ ಹಾಗೂ ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಮತ್ತು ಟ್ರ್ಯಕ್ಟರ್ಗಳಲ್ಲಿ ಜೋರಾಗಿ ಹಾಡು ಹಾಕಿಕೊಂಡು ಸಂಚರಿಸದಂತೆ ಡಂಗುರ ಸಾರಲು ತಾಲೂಕ ಪಂಚಾಯತ್ ರೋಣ ಆದೇಶ ಹೊರಡಿಸಿದೆ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ರೋಣ ಇವರ ಪತ್ರದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ಓದಿಗೆ ಶಾಂತ ವಾತಾವರಣ ಒದಗಿಸಿ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಸುಧಾರಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.ಈ ಕುರಿತು ರೋಣ ಹಾಗೂ ಗಜೇಂದ್ರಗಡ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಕ್ಷಣ ಡಂಗುರ ಸಾರಿಸಿ,
ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್, ಟಿವಿ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಅಧ್ಯಯನಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕ ಪಂಚಾಯತ್ ಮನವಿ ಮಾಡಿದೆ. ಕೊಟ್“ಇವತ್ತಿನ ಮಕ್ಕಳಿಗೆ ಓದಲು ಸಮಯ ಕೊಡುವುದು ತುಂಬಾ ಮುಖ್ಯ. ಸಂಜೆ ಹೊತ್ತಿಗೆ ಟಿವಿ, ಮೊಬೈಲ್, ಜೋರಾದ ಹಾಡುಗಳಿಂದ ಮಕ್ಕಳ ಗಮನ ಬೇರೆಡೆ ಹೋಗುತ್ತಿತ್ತು. ಸರ್ಕಾರ ಹಾಗೂ ತಾಲೂಕ ಪಂಚಾಯತ್ ತೆಗೆದುಕೊಂಡಿರುವ ಈ ನಿರ್ಧಾರ ಬಹಳ ಒಳ್ಳೆಯದು. ನಾವು ಗ್ರಾಮಸ್ಥರು ಎಲ್ಲರೂ ಸಹಕರಿಸುತ್ತೇವೆ.”ಶಿವಾನಂದ, ಗ್ರಾಮಸ್ಥರು ಕೊಟ್ :“ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳ ಭವಿಷ್ಯ ನಮ್ಮೆಲ್ಲರ ಜವಾಬ್ದಾರಿ. ಮಕ್ಕಳ ಓದಿಗೆ ಅನುಕೂಲವಾಗುವ ಶಾಂತ ವಾತಾವರಣ ನಿರ್ಮಾಣವೇ ಈ ಕ್ರಮದ ಉದ್ದೇಶ. ಸಾರ್ವಜನಿಕರ ಸಹಕಾರದಿಂದ ಉತ್ತಮ ಫಲಿತಾಂಶ ಸಾಧಿಸಬಹುದು.” ಚಂದ್ರಶೇಖರ ಬಿ. ಕಂದಕೂರ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 