ಶೀಘ್ರದಲ್ಲಿ ಶಿಕ್ಷಕರ ಭವನಕ್ಕೆ 10 ಲಕ್ಷ ರೂ ಅನುದಾನ: ಶಾಸಕ ರಾಜುಗೌಡ
Rs 10 lakh grant for Teachers' Hall soon: MLA Rajugowda
ಶೀಘ್ರದಲ್ಲಿ ಶಿಕ್ಷಕರ ಭವನಕ್ಕೆ 10 ಲಕ್ಷ ರೂ ಅನುದಾನ: ಶಾಸಕ ರಾಜುಗೌಡ
ದೇವರಹಿಪ್ಪರಗಿ 02: ನೂತನ ತಾಲೂಕಿನ ಶಿಕ್ಷಕರ ಸಮುದಾಯ ಭವನ ನಿರ್ಮಾಣಕ್ಕೆ ಶೀಘ್ರದಲ್ಲಿ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಶಾಲಾ ಆವರಣದಲ್ಲಿ ಜಿ.ಪಂ ವಿಜಯಪುರ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ಶನಿವಾರ ನಡೆದ ಗುರು ಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇವರಹಿಪ್ಪರಗಿ ಪಟ್ಟಣ ತಾಲೂಕಿನ ಕೇಂದ್ರ ಸ್ಥಾನವಾಗಿದ್ದು ಶಿಕ್ಷಕರ ಅನುಕೂಲಕ್ಕಾಗಿ ಸಂಘದ ಬೇಡಿಕೆಯಂತೆ ಶೀಘ್ರದಲ್ಲಿ 10 ಲಕ್ಷ ಅನುದಾನ ನೀಡಲಾಗುವುದು. ಬರುವಂಥ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಅದನ್ನು ಪೂರ್ಣಗೊಳಿಸುವ ಕೆಲಸ ಮಾಡೋಣ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಲುವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಸರ್ಕಾರ ಕೂಡಲೆ ಸ್ಪಂದಿಸಬೇಕು ಹಾಗೂ ಶಿಕ್ಷಕರ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಸಂಘದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹಾಂತೇಶ ಯಡ್ರಾಮಿ ಅವರು ಗುರು ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದಾರೆ ಶಿಕ್ಷಕರು ಗುರು ಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಿಂದಗಿ ಬಿಇಒ ಮಹಾಂತೇಶ ಯಡ್ರಾಮಿ ಅವರು ಮಾತನಾಡಿ, ಶಿಕ್ಷಕರ ಸಮಸ್ಯೆ ಹಾಗೂ ಅಭಿಪ್ರಾಯ ಹಂಚಿಕೊಳ್ಳಲು ಗುರು ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಕರ 10, 15, 20, 25 ವರ್ಷದ ಟೈಮ್ ಬಾಂಡಗಳನ್ನು ಹಾಕುವದು ಮತ್ತು ಸ್ಥಳದಲ್ಲಿಯೇ ಆದೇಶಗಳನ್ನು ವಿತರಿಸುವದು ಮತ್ತು ಶಿಕ್ಷಕರ ಗಳಿಕೆ ರಜೆಗಳನ್ನು ಸೇವಾ ಪುಸ್ತಕದಲ್ಲಿ ನಮೂದಿಸುವದು. ಶಿಕ್ಷಕರ ಶೈಕ್ಷಣಿಕ ಅರ್ಹತೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲಾಗುವದು. ಒಟ್ಟಾರೆಯಾಗಿ ಈ ಕಾರ್ಯಕ್ರಮ ಶಿಕ್ಷಕರ ಅಲೆದಾಟ ತಪ್ಪಿಸಿ ಸೇವಾ ಪುಸ್ತಕದಲ್ಲಿ ಅಗತ್ಯ ವಿಷಯಗಳನ್ನು ದಾಖಲಿಸುವದು ಇದರ ಉದ್ದೇಶವಾಗಿದೆ’ ಎಂದರು.ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿ.ಎಸ್.ಬೇವನೂರ ಹಾಗೂ ತಾಲ್ಲೂಕು ಅಧ್ಯಕ್ಷರಾದ ಎ.ಎಚ್.ವಾಲಿಕಾರ ಅವರು ಮಾತನಾಡಿ, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರಿಗೆ ಸ್ಪಂದಿಸುವಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದವರು. ಇಲಾಖೆಯ ಯಾವುದೇ ಸಮಸ್ಯೆಯನ್ನು ಶಿಕ್ಷಕರ ಸಂಘ ಮನವಿ ಸಲ್ಲಿಸಿದ ಕೂಡಲೇ ಪರಿಹಾರಕ್ಕೆ ಕ್ರಮಕೈಗೊಳ್ಳುವರು. ಪ್ರತಿ ಶಾಲೆಯ ಶಿಕ್ಷಕರು ಶಿಕ್ಷಣ ಇಲಾಖೆಗೆ ನೀಡುವ ಮಾಹಿತಿ, ದಾಖಲಾತಿ, ದಿನನಿತ್ಯದ ಕಾರ್ಯಗಳ ವರದಿ, ಮಕ್ಕಳ ಶಿಕ್ಷಣದ ಗುಣಮಟ್ಟ, ಹೀಗೆ ಕರ್ತವ್ಯದಲ್ಲಿ ಅನುಭವಿಸುವ ಸಮಸ್ಯೆಗಳು ಸುದೀರ್ಘವಾಗಿ ಉಳಿಯದಂತೆ ಬಗೆಹರಿಸಲು ಇಂತಹ ಗುರು ಸ್ಪಂದನಾ ಕಾರ್ಯಕ್ರಮ ಆಯೋಜನೆಗೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಅನುಮತಿ ನೀಡಿದ್ದು ಸಂತೋಷವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಎ. ಎಸ್. ಡೋಣೂರ,ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ವಿ.ಕೆ. ಪಾಟೀಲ, ಶಿಕ್ಷಣ ಸಂಯೋಜಕ ಎಸ್.ಎಮ್. ಕಪನಿಂಬರಗಿ,ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಸಿ.ತಳಕೇರಿ,ವ್ಯವಸ್ಥಾಪಕ ಅಶೋಕ ಗಜಾಕೋಶ,ನೌಕರರ ಸಂಘದ ಪದಾಧಿಕಾರಿ ಸಿ.ಬಿ. ಗಡಗಿ, ಎನ್.ಎಸ್.ನಾಗೂರ,ಪಿ. ಎಸ್. ಮಿಂಚನಾಳ, ಬಸವರಾಜ ನಾಗರಾಳ,ಸೇರಿದಂತೆ ತಾಲ್ಲೂಕಿನ ಹಾಗೂ ಕಲಕೇರಿ ವಲಯದ ಐದುನೂರಕ್ಕೂ ಹೆಚ್ಚು ಶಿಕ್ಷಕರು, ಶಿಕ್ಷಕಿಯರು, ಸಂಘದ ಪದಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ನೂತನ ತಾಲೂಕಿನ ಶಿಕ್ಷಕರ ಸಮಸ್ಯೆಗಳಿಗೆ ಗುರು ಸ್ಪಂದನಾ ಕಾರ್ಯಕ್ರಮದ ಮೂಲಕ ಸ್ಪಂದಿಸಿದ ಕ್ಷೇತ್ರದ ಶಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದಗಳು.-ಎಸ್.ಎಸ್.ಸಾತಿಹಾಳ.ಮುಖ್ಯ ಗುರುಗಳು ಕೆರೂಟಗಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 