ಪಟ್ಟಣಕುಡಿ-ನಾಯಿಂಗ್ಲಜ್ ರಸ್ತೆ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಮಂಜೂರು ರಾಜ್ಯದಲ್ಲಿ ಅಭಿವೃದ್ಧಿ ಪರ್ವ-ಶಾಸಕ ಗಣೇಶ ಹುಕ್ಕೇರಿ

Rs 2 crore grant sanctioned for construction of Pattankudi-Nainglaj road, development in the state

ಪಟ್ಟಣಕುಡಿ-ನಾಯಿಂಗ್ಲಜ್ ರಸ್ತೆ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಮಂಜೂರು ರಾಜ್ಯದಲ್ಲಿ ಅಭಿವೃದ್ಧಿ ಪರ್ವ-ಶಾಸಕ ಗಣೇಶ ಹುಕ್ಕೇರಿ 

ಚಿಕ್ಕೋಡಿ, 23 : ರಾಜ್ಯದ ಜನಪ್ರೀಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಜೊತೆಗೆ ರಸ್ತೆ, ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಹೆಚ್ಚಿನ ಆಧ್ಯತೆ ನೀಡಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದೆ. ಚಿಕ್ಕೋಡಿ-ಸದಲಗಾ ಕ್ಷೇತ್ರ ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪಟ್ಟಣಕುಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ ರೂ ವೆಚ್ಚದಲ್ಲಿ ಪಟ್ಟಣಕುಡಿ-ನಾಯಿಂಗ್ಲಜ್ ರಸ್ತೆಯ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ವಿಶೇಷ ಗಮನ ಹರಿಸಿದೆ. ಉತ್ತಮ ರಸ್ತೆ ಸಂಪರ್ಕ ಗ್ರಾಮೀಣ ಭಾಗದ ಅಭಿವೃದ್ಧಿಗೆ ಅತ್ಯವಶ್ಯಕವಾಗಿದ್ದು, ಕ್ಷೇತ್ರದ ಜನತೆ ಸುಗಮ ಸಂಚಾರ ಹೊಂದಲು ಸರ್ಕಾರ ವಿಶೇಷ ಅನುದಾನ ಒದಗಿಸಿದೆ. ಕ್ಷೇತ್ರದ ಜನರಿಗೆ ಅನುಕೂಲವಾಗಲು ಸಮರ​‍್ಕ ಕುಡಿಯುವ ನೀರು, ರಸ್ತೆ, ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಲಾಗಿದೆ ಎಂದರು. ಪಟ್ಟಣಕುಡಿ-ನಾಯಿಂಗ್ಲಜ್ ರಸ್ತೆಯು ಸುಮಾರು 6 ಕಿ.ಮೀದವರೆಗೆ ಗುಣಮಟ್ಟ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ 2 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಕೊಡಬೇಕು. ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದರು. ದುರೀಣ ವಿನೋಧ ಕಾಗೆ ಮಾತನಾಡಿ, ಚಿಕ್ಕೋಡಿ-ಸದಲಗಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪಟ್ಟಣಕುಡಿ ಜಿಪಂ ಕ್ಷೇತ್ರದಲ್ಲಿ ಕಳೆದ 15 ವರ್ಷದಿಂದ ಇಲ್ಲಿಯವರಿಗೆ ಶಾಸಕ ಗಣೇಶ ಹುಕ್ಕೇರಿ ಮತ್ತು ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಸುಮಾರು 1 ಸಾವಿರ ಕೋಟಿ ರೂಯಷ್ಟು ಅಭಿವೃದ್ಧಿ ಕಾರ್ಯಕೈಗೊಂಡಿದ್ದಾರೆ. ಪಟ್ಟಣಕುಡಿ ಭಾಗಕ್ಕೆ ಏನೇ ಸಮಸ್ಯೆ ಇದ್ದರೂ ಅದನ್ನು ತ್ವರಿತವಾಗಿ ಬಗೆಹರಿಸಿ ಜನರ ಮನಸ್ಸು ಗೆದ್ದಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ತಾಲೂಕಾ ಅಧ್ಯಕ್ಷ ರಮೇಶ ಪಾಟೀಲ, ಶಿವಗೌಡ ಪಾಟೀಲ, ಸುಕುಮಾರ ಡಿಗ್ರೆ, ಅಣ್ಣಾಸಾಹೇಬ ನಾಯಿಕ, ಮಹಾದೇವ ಕವಲಾಪೂರೆ, ರಾವಸಾಹೇಬ ಕಮತೆ, ಕಲ್ಲಪ್ಪ ನೇರ್ಲಿ, ಪೋಪಟ ಶಿಂಗಟೆ, ಭರಮು ಖೋತ ಸೇರಿದಂತೆ ಪಟ್ಟಣಕುಡಿ, ವಾಳಕಿ, ನಾಯಿಂಗ್ಲಜ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.