ಬರ ತಾಲೂಕುಗಳಿಗೆ ಹೆಚ್ಚುವರಿ 50 ಲಕ್ಷ ರೂ. ಅನುದಾನ ಡಿಸೆಂಬರ್ ಅಂತ್ಯಕ್ಕೆ ಬರಪೀಡಿತ ಪಟ್ಟಿಗೆ ಮತ್ತಷ್ಟು ತಾಲೂಕುಗಳು

ಬೆಳಗಾವಿ: 19 :ರಾಜ್ಯದಲ್ಲಿ ಈಗಾಗಲೇ ಘೋಷಣೆಯಾಗಿರುವ ನೂರು ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಹಾಗೂ ಈ ತಿಂಗಳಾಂತ್ಯದಲ್ಲಿ ಮತ್ತಷ್ಟು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುವುದಾಗಿ ಕಂದಾಯ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. 

  ವಿಧಾನ ಸಭೆಯಲ್ಲಿ ಇಂದು ಬರಗಾಲ ಕುರಿತಂತೆ ನಡೆಸಿದ ಚಚರ್ೆಗೆ ಉತ್ತರಿಸಿ ಅವರು ಕೇಂದ್ರ ಸಕರ್ಾರದ ಬರ ನಿರ್ವಹಣೆ ಕೈಪಿಡಿ-2016 ರ ಅನ್ವಯ ರಾಜ್ಯದಲ್ಲಿ ಈಗಾಗಲೇ ನೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಡಿಸೆಂಬರ್ 31 ರ ನಂತರ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಘೋಷಿಸಿರುವ ಬರಪೀಡಿತ ತಾಲೂಕುಗಳಿಗೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಆದಾಗ್ಯೂ ಬರದ ತೀಕ್ಷ್ಣತೆಯನ್ನು ಗಮನಿಸಿ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು. 

ರಾಜ್ಯದಲ್ಲಿ ಬರ ನಿರ್ವಹಣೆ ಸಂಬಂಧ ಸಕರ್ಾರ ಮುಂದಾಲೋಚನೆ ಮಾಡಿ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸುವ ಸಂಬಂಧ ಕೈಗೊಳ್ಳಬಹುದಾದ ಎಲ್ಲಾ ಕಾರ್ಯಕ್ರಮಗಳಿಗೂ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು. 

ಕನರ್ಾಟಕ ರಾಜ್ಯ ಕಳೆದ 14 ವರ್ಷಗಳಲ್ಲಿ ಬರ ಪರಿಸ್ಥಿತಿ ಎದುರಿಸಿದೆ. ಭಾರತ ಸಕರ್ಾರ ದೇಶದ 24 ಜಿಲ್ಲೆಗಳಲ್ಲಿ ಕನರ್ಾಟಕದ 16 ಜಿಲ್ಲೆಗಳು ನಿರಂತರ ಬರದ ಜಿಲ್ಲೆಗಳೆಂದು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಸತತ ಬರಗಾಲ ಸ್ಥಿತಿಯಲ್ಲಿರುವ ಕನರ್ಾಟಕ ರಾಜ್ಯದಲ್ಲಿನ ಬರಪರಿಸ್ಥಿತಿ ನಿಭಾಯಿಸಲು ರಾಜ್ಯ ಸಕರ್ಾರ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದೆ. 

ಕಳೆದ ಮುಂಗಾರಿನಲ್ಲಿ ಕೊಡಗು, ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಮಾತ್ರ 804 ಮಿ.ಮೀ. ಮಳೆ ಬಿದ್ದಿದ್ದು, ಉಳಿದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ತೋಟಗಾರಿಕೆ, ಕೃಷಿ ಬೆಳೆಗಳು ಸೇರಿದಂತೆ ಮುಂಗಾರು ಬೆಳೆ ಉತ್ಪಾದನೆಯಲ್ಲಿ ಕುಂಠಿತವಾಗಿದೆ ಹಾಗೂ ಸಾಕಷ್ಟು ಬೆಳೆಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಕರ್ಾರದ ಇನ್ಪುಟ್ ಸಬ್ಸಿಡಿ ಪರಿಹಾರಗಳನ್ನು ಈಗಾಗಲೇ ರಾಜ್ಯದ ರೈತರಿಗೆ ವಿತರಣೆ ಮಾಡಲಾಗಿದೆ. 

ರಾಜ್ಯದಲ್ಲಿ ಉಲ್ಬಣಿಸಿರುವ ಬರ ಪರಿಸ್ಥಿತಿಯನ್ನು ಎಲ್ಲಾ ಇಲಾಖೆಗಳ ಸಹಕಾರದಿಂದ ನಿಭಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಲುವಾಗಿ ಏಳು ಸಚಿವ ಸಂಪುಟ ಸಭೆಗಳನ್ನು ಮಾಡಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿಯವರು ಪತ್ರ ಬರೆದು ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿದರ್ೆಶನ ನೀಡಿದ್ದಾರೆ. 

ಬರಗಾಲಕ್ಕೆ ತುತ್ತಾಗಿರುವ ತಾಲೂಕುಗಳಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆಧ್ಯತೆ ಮೇಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬರಪೀಡಿತ ತಾಲೂಕುಗಳೆಂದು ಘೋಷಣೆ ಆಗದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ತಾಲೂಕುಗಳಿಗೂ ತಲಾ 25 ಲಕ್ಷ ರೂ. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. 

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 17 ಜಿಲ್ಲೆಗಳ 209 ಗ್ರಾಮಗಳಲ್ಲಿ 409 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ 382 ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಕುಡಿಯುವ ನೀರು ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೇ ಆಯಾ ತಾಲೂಕುಗಳಲ್ಲಿ ತಹಶೀಲ್ದಾರರ ಪಿ.ಡಿ. ಖಾತೆಗಳಲ್ಲಿ ಕನಿಷ್ಠ 10 ಲಕ್ಷ ರೂ.ಹಣ ಇಡಲಾಗಿದೆ ಎಂದು ಸಚಿವ   ಆರ್.ವಿ. ದೇಶಪಾಂಡೆ ತಿಳಿಸಿದರು.  

ರಾಜ್ಯದಲ್ಲಿ ಜಾನುವಾರುಗಳಿಗೆ 92.62 ಮೆಟ್ರಿಕ್ಟನ್ ಮೇವಿನ ಅಗತ್ಯವಿದೆ. ಈಗಾಗಲೇ ಪಶುಸಂಗೋಪನೆ ಇಲಾಖೆಯಿಂದ 15 ಕೋಟಿ. ರೂ. ವೆಚ್ಚದಲ್ಲಿ ಮೇವಿನ ಮಿನಿ ಕಿಟ್ಗಳನ್ನು ವಿತರಿಸಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ಮೇವು ಸಂಗ್ರಹಣಾ ಕೇಂದ್ರ ಹಾಗೂ ಗೋಶಾಲೆಗಳನ್ನು ನಿಮರ್ಿಸಲು ಸ್ಥಳ ಗುರುತಿಸಲಾಗಿದ್ದು, ರಾಜ್ಯದಲ್ಲಿ 224 ಮೇವು ಸಂಗ್ರಹಣಾ ಕೇಂದ್ರಗಳು ಹಾಗೂ 294 ಗೋಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ.  ಅಲ್ಲದೇ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇನ್ನಿತರ ಕೆಲವು ಜಿಲ್ಲೆಗಳಲ್ಲಿ ಹಸಿರು ಮೇವು ಬೆಳೆಯಲು ಹೆಚ್ಚುವರಿಯಾಗಿ ಕಿಟ್ಗಳನ್ನು ವಿತರಿಸಲಾಗಿದೆ. 

ಬರಗಾಲದ ಸ್ಥಿತಿಯಲ್ಲಿ ರಾಜ್ಯದ ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೆಚ್ಚುವರಿ ಉದ್ಯೋಗಗಳನ್ನು ಸೃಜಿಸಲಾಗಿದೆ. 

ಪ್ರತಿ ಜಾಬ್ಕಾಡರ್್ದಾರರಿಗೆ ಪ್ರಸ್ತುತ ಈಗಿರುವ ವಾಷರ್ಿಕ 100 ದಿನಗಳನ್ನು ಪರಿಷ್ಕರಿಸಿ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆಯ ಉದ್ಯೋಗಗಳನ್ನು ಸೃಜಿಸಲು ಚಿಂತಿಸಲಾಗಿದೆ ಎಂದು ಸಚಿವರು ತಿಳಿಸಿದರು. 

ಬರಪೀಡಿತ ತಾಲೂಕುಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಕೈಗೊಳ್ಳುವ ಮೂಲಕ, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ. ಅಲ್ಲದೇ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದಶರ್ಿಯವರ ನೇತೃತ್ವದಲ್ಲಿ ಹವಾಮಾನ ನಿಗಾವಹಿಸಲಾಗುತ್ತಿದೆ. 

ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 5 ಕೋಟಿಯಂತೆ ರಾಜ್ಯಾದ್ಯಂತ 226 ಕೋಟಿ  ರೂ. ಅನುದಾನ ಲಭ್ಯವಿದೆ. ಈಗಾಗಲೇ ಎಪ್ರೀಲ್ ನಿಂದ ನವೆಂಬರ್ ವರೆಗೆ 142.58 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಅನುದಾನ 5 ರೂ.  ಕೋಟಿಗಿಂತ ಕಡಿಮೆ ಇದ್ದಲ್ಲಿ ಅನುದಾನದ ಬೇಡಿಕೆಯನ್ವಯ ಮಂಜೂರಾತಿ ನೀಡಲಾಗುವುದು. ಬರಪರಿಸ್ಥಿತಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಹಣಕಾಸಿನ ಕೊರತೆ ಇಲ್ಲ. 

ಈ ವರ್ಷದ ಮುಂಗಾರಿನಲ್ಲಿ ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಿನ್ನೆಲೆಯಲ್ಲಿ ಕೇಂದ್ರ ಸಕರ್ಾರದಿಂದ 546 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಬೆಳೆಯ ಹಾನಿ ಸಂತ್ರಸ್ಥ ರೈತರ ಖಾತೆಗೆ ಪರಿಹಾರ ಜಮಾ ಮಾಡಲಾಗುತ್ತಿದೆ. ಮುಂದಿನ ಒಂದು ವಾರದೊಳಗಾಗಿ ಜಿಲ್ಲೆಯ ಎಲ್ಲಾ ರೈತರ ಖಾತೆಗಳಲ್ಲಿ ಈ ಪರಿಹಾರ ಹಣ ಜಮಾ ಆಗಲಿದೆ. ಅಲ್ಲದೇ ಅತಿವೃಷ್ಟಿಯಿಂದ ಜೀವಹಾನಿಗೊಳಗಾದ ಸಂತ್ರಸ್ಥ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯಸಕರ್ಾರದ ಪರಿಹಾರ ಸೇರಿ ತಲಾ 7 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. 

ಮುಂಗಾರಿನಲ್ಲಿ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ಸಮೀಕ್ಷೆಗೆ ಕೇಂದ್ರ ಸಕರ್ಾರದ ತಂಡ ಆಗಮಿಸಿ ಸುಮಾರು 13 ಜಿಲ್ಲೆಗಳಲ್ಲಿ ಪ್ರವಾಸ ಮಾಡಿತ್ತು. ಈ ಸಂದರ್ಭದಲ್ಲಿ ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯಸಕರ್ಾರ ಕೈಗೊಂಡ ಕ್ರಮಗಳ ಬಗ್ಗೆ ತಂಡ ಪ್ರಶಂಸೆ ವ್ಯಕ್ತಪಡಿಸಿದೆ. ಆದರೂ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜಸ್ಥಾನಗಳಿಗೆ ಹೋಲಿಸಿದರೆ ರಾಜ್ಯಸಕರ್ಾರಕ್ಕೆ ಬಿಡುಗಡೆಯಾಗಿರುವ ಮೊತ್ತ ಅತ್ಯಂತ ಕಡಿಮೆ ಇದೆ. ಈ ಸಂಬಂಧ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದು, ಕೇಂದ್ರ ಸಕರ್ಾರದಿಂದ ಸಕಾರಾತ್ಮಕ ಉತ್ತರ ದೊರೆತಿದೆ. ಹೆಚ್ಚುವರಿ ಅನುದಾನ ಬಿಡುಗಡೆಯಾಗುವ ವಿಶ್ವಾಸ ಇದೆ ಎಂದು ಸಚಿವರು ತಿಳಿಸಿದರು.