ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಅಧ್ಯಕ್ಷ ಬಿ.ನಾರಾಯಣಪ್ಪ

ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಅಧ್ಯಕ್ಷ ಬಿ.ನಾರಾಯಣಪ್ಪ Rural Development Scheme to facilitate self-reliant livelihood for rural women President B. Narayan

ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಅಧ್ಯಕ್ಷ ಬಿ.ನಾರಾಯಣಪ್ಪ 

ಕಂಪ್ಲಿ:ಆ.21. ತಾಲೂಕಿನ ರಾಮಸಾಗರ ಗ್ರಾಮದ ವೀರಶೈವ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಗುರುವಾರ ನಡೆಯಿತು. ಕಲ್ಯಾಣ ಕರ್ನಟಕ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ದಿನಗಳಲ್ಲಿ ಪೂಜೆ, ಪುನಸ್ಕಾರ  ಮಾಡಿಕೊಂಡು ಬಂದರೆ, ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಜೊತೆಗೆ ಇಷ್ಟಾರ್ಥಗಳು ಲಭಿಸಲಿವೆ. ನಿತ್ಯ ನಮ್ಮ ಸುತ್ತ ಹಲವಾರು ಘಟನೆಗಳು ಘಟಿಸುತ್ತಿರುತ್ತವೆ. ಅಂಥವುಗಳಲ್ಲಿ ಯಾವುದು ನಮಗೆ ಬೇಕು, ಬೇಡ ಎಂಬುದನ್ನು ನಿರ್ಧರಿಸಿ ಮುನ್ನಡೆಯಬೇಕು. ನಮ್ಮ ಬದುಕಿಗೆ ಬೇಕಿರುವ ವಿಚಾರಗಳಲ್ಲಿ ನಮ್ಮನ್ನು ನಾವು ಕೇಂದ್ರೀಕರಿಸಿಕೊಳ್ಳುವುದನ್ನು ಕಲಿಯಬೇಕು. ಆಗ ಮಾತ್ರ ನಾವು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು. ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಬಿ.ನಾರಾಯಣಪ್ಪ ಮಾತನಾಡಿ, ಯೋಜನೆ ಗ್ರಾಮೀಣ ಭಾಗದ ಮಹಿಳೆಯರ ಜೀವನಾಡಿಯಾಗಿ ಕೆಲಸ ಮಾಡುತ್ತಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ. ಯಶಸ್ಸು ಕಾಣುವುದರೊಂದಿಗೆ ಪರಸ್ಪರ ಅನೋನ್ಯತೆಯು ವೃದ್ಧಿಸುತ್ತದೆ ಎಂದರು. ಪೂಜಾ ಸಮಿತಿ ಗೌರವಾಧ್ಯಕ್ಷ ಹೆಚ್‌.ಶಿವಶಂಕರಗೌಡ ಅಧ್ಯಕ್ಷತೆವಹಿಸಿದ್ದರು. ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಶ್ರದ್ಧೆಯಿಂದ ನೆರವೇರಿದವು. ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕ ಬಿ.ರವಿ, ಧರ್ಮಸ್ಥಳ ಟ್ರಸ್ಟ್‌ ನ ಜಿಲ್ಲಾ ನಿರ್ದೇಶಕ ರೋಹಿತಾಕ್ಷ, ಗ್ರಾಪಂ ಅಧ್ಯಕ್ಷೆ ಎಂ.ಆಶಾ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಎಲ್, ತಾಲೂಕು ಕೃಷಿ ಅಧಿಕಾರಿ ಸಂಜುಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೇಖಾ, ತಾಲೂಕು ವಿಚಕ್ಷಣಾಧಿಕಾರಿ ಶ್ರಿಶೈಲ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ, ಕೋಶಾಧಿಕಾರಿ ಪಿ.ಮುಕ್ಕಣ್ಣ, ಪೂಜಾ ಸಮಿತಿಯ ಉಪಾಧ್ಯಕ್ಷರಾದ ಹೆಚ್‌.ಜಗನ್ನಾಥಗೌಡ, ಟಿ.ಎಂ.ಸಾವಿತ್ರಮ್ಮ, ಎ.ಮಹೇಶ, ಡಿ.ಕೃಷ್ಣಪ್ಪ, ಹೆಚ್‌.ಲಿಂಗೇಶ, ಹೆಚ್‌.ಜಗದೀಶ ಪೂಜಾರಿ ಹಾಗೂ ಸಿದ್ದಯ್ಯಸ್ವಾಮಿ, ಪ್ರವೀಣ್ ಕುಮಾರ, ಹೆಚ್‌.ಚನ್ನಬಸಯ್ಯಸ್ವಾಮಿ ಸೇರಿದಂತೆ ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.