ಎಸ್.ರಾಮಪ್ಪಗೆ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರದ ಗೌರವ
S. Ramappa honored with Shiksha Ratna Award
ಕಂಪ್ಲಿ 21: ವಿಜಯಪುರದ ಸಂತ ಅಣ್ಣಮ್ಮನವರ ಚರ್ಚ್ ಸಭಾಂಗಣದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಯುಗದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಕಾವ್ಯ ಸಂಭ್ರಮ ಮತ್ತು ವಿವಿಧ ಕ್ಷೇತ್ರದ ಸಾಧಕರ ರತ್ನ ಪ್ರಶಸ್ತಿ-2025 ವಿತರಣಾ ಸಮಾರಂಭದಲ್ಲಿ ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ಎಸ್.ರಾಮಪ್ಪ ಇವರು ಶಿಕ್ಷಣ ರತ್ನ ಪ್ರಶಸ್ತಿ ಸ್ವೀಕರಿಸಿದರು. ಇಲ್ಲಿನ ಸಮಾರಂಭದಲ್ಲಿ ಗಣ್ಯರು ಎಸ್.ರಾಮಪ್ಪ ಅವರ ಶೈಕ್ಷಣಿಕ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಜಿ.ಶಿವಣ್ಣ, ಯುಗದರ್ಶಿನಿ ಮಹಿಳಾ ಫೌಂಡೇಶನ್ ನ ಅಧ್ಯಕ್ಷ ಸರಸ್ವತಿ ಚಿಮ್ಮಲಗಿ, ಮಕ್ಕಳ ಸಾಹಿತಿ ರಾಶಿ ವಾಡಿದ್ ಆಶಾಕಿರಣ ಮಹಿಳಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮೀನಾಕ್ಷಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 