“ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ” ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿದ ಎಸ್.ಎಮ್ ಹೊನಕೇರಿ
S.M. Honakeri inaugurated the program as part of the “International Day of the Girl Child”
ಧಾರವಾಡ 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಹೆಚ್.ವಿಭಾಗ, ಜಿಲ್ಲಾ ಮಾಹಿತಿ, ಶಿಕ್ಷಣ, ಸಂವಹನ ವಿಭಾಗ ಹಾಗೂ ಪ್ರಜೆೆಂಟೇಷನ್ ಬಾಲಕಿಯರ ಪ್ರೌಢಶಾಲೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ “ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ” ದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಯಿತು.
ಧಾರವಾಡ ಜಿಲ್ಲಾ ಆರೋಗ್ಯ ್ಘ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಮ್ ಹೊನಕೇರಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನವಿದೆ. “ ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾ “ ಎಂದಿದ್ದಾರೆ ಹಿರಿಯರು ಆದರೂ ದೇಶದಲ್ಲಿ ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ. ಹೆಣ್ನು ಮಗುವನ್ನು ಮನೆ ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುತ್ತಾರೆ. ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿಸಲು ಪ್ರತಿವರ್ಷ ಜನವರಿ-24 ರಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಲಾಗುತ್ತದೆ.
ಹೆಣ್ಣು ಮಕ್ಕಳ ರಕ್ಷಣೆ ಮತ್ತು ಸಬಲಿಕರಣಕ್ಕಾಗಿ ಭಾರತ ಸರ್ಕಾರ ಭೇಟಿ ಬಚಾವೋ ಭೇಟಿ ಪಡಾವೋ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಹಲವಾರು ಉಪಕ್ರಮಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ದೇಶದಲ್ಲಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿವೆ. ಈ ಪ್ರಯತ್ನಗಳಿಗೆ ವಿವಿಧ ಅಭಿಯಾನಗಳು ಮತ್ತು ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪುಷ್ಠಿ ನೀಡುತ್ತಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಸಿಸ್ಟರ್ ರೆನಿಟಾ ಪಿಂಟೋ ಮುಖ್ಯೋಪಾಧ್ಯಾಯರು ಮಾತನಾಡಿ,“ಹೆಣ್ಣು ಮಗು ಒಂದು ಹೊರೆಯಲ್ಲ, ಬದಲಾಗಿ ಒಂದು ಕುಟುಂಬದ ಜವಾಬ್ದಾರಿ” ಮತ್ತು ಭರವಸೆ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕು. ಹೆಣ್ಣುಮಕ್ಕಳು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಬಾಹ್ಯಾಕಾಶದಿಂದ ಕ್ರೀಡೆವರೆಗೆ, ರಾಜಕೀಯದಿಂದ ಉದ್ಯಮದವರೆಗೆ ಸಾಧನೆ ಮಾಡುತ್ತಿದ್ದಾರೆ. ಅವರಿಗೆ ಉತ್ತಮ ಶಿಕ್ಷಣ ಮತ್ತು ಪ್ರೋತ್ಸಾಹ ನೀಡಿದರೆ ಅವರು ನಾಯಕರಾಗಿ ಹೊರಹೊಮ್ಮುತ್ತಾರೆ. ಕೊನೆಯದಾಗಿ ಹೆಣ್ಣನ್ನು ಉಳಿಸಿ ಹೆಣ್ಣನ್ನು ಓದಿಸಿ ಎಂಬ ಸಂದೇಶದೊಂದಿಗೆ ಪ್ರತಿಯೊಬ್ಬ ಹೆಣ್ಣು ಮಗುವಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡಿ ಅವರನ್ನು ಗೌರವಿಸುವ ಪ್ರತಿಜ್ಞೆ ಮಾಡೋಣ.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ ಸುಜಾತಾ ಹಸವಿಮಠ ಪ್ರಾಸ್ತಾವಿಕವಾಗಿ ಮಾತನಾಡಿ ಸಮಾಜದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣದ ಮಹತ್ವ, ಆರೋಗ್ಯ ಮತ್ತು ಪೋಷಣೆಯ ಬಗ್ಗೆ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಆರ್ ಪಾತ್ರೋಟ ಭಾರತದಲ್ಲಿ ಪ್ರತಿ ವರ್ಷ ಜನವರಿ-24 ರಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಲಾಗುತ್ತದೆ ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಸಲು ಪ್ರಾರಂಭಿಸಿತು. ಪ್ರತಿ ವರ್ಷ ಜನವರಿ-24 ರಂದು ಹೆಣ್ಣು ಮಕ್ಕಳ ದಿನವನ್ನು ನಿರ್ದಿಷ್ಠ ಕಾರಣಕ್ಕಾಗಿ ಆಚರಿಸಲಾಗುತ್ತದೆ. ಇದಕ್ಕೆಲ್ಲ ಕಾರಣ ಇಂದಿರಾಗಾಂಧಿಯವರು 1966 ರಲ್ಲಿ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜನವರಿ -24 ಭಾರತದ ಇತಿಹಾಸದಲ್ಲಿ ್ಘ ಮಹಿಳಾ ಸಬಲೀಕರಣದಲ್ಲಿ ಮಹತ್ವದ ದಿನವಾಗಿದೆ ಎಂದು ತಿಳಿಸಿದರು.
ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ತನುಜಾ ಕೆ.ಎನ್ ಮಾತನಾಡಿ ಗಂಡು, ಹೆಣ್ಣು ಸಮಾನ ಎಂಬ ಮನೋಭಾವವನ್ನು ಸಮಾಜದಲ್ಲಿ ಮೂಡಿಸುವುದು. ಹೆಣ್ಣು ಭ್ರೂಣ ಹತ್ಯೆ ಮತ್ತು ಬಾಲ್ಯ ವಿವಾಹದಂತಹ ದುಷ್ಠ ಪದ್ದತಿಗಳನ್ನು ಹೋಗಲಾಡಿಸುವುದು, ಕ್ಷೀಣಿಸುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸುಧಾರಿಸಲು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಹಾಗೂ ಲಿಂಗ ಅಸಮಾನತೆಯನ್ನು ತೆಗೆದುಹಾಕುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಮ್.ಎನ್ ಅಗಡಿ ಸ್ವಾಗತಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರೇಖಾ ಬಾಡಗಿ ವಂದಿಸಿದರು. ಕುಮಾರಿ ವರ್ಷ ಹಾಗೂ ತಂಡದವರಿಂದ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕೆ.ಎನ ಭಟ್ ಹಾಗೂ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 