ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಮೀಸಲಿದ್ದು, ಪೂರ್ಣ ಪ್ರಮಾಣದಲ್ಲಿ ವ್ಯಯಿಸಿ: ಜಿಲ್ಲಾಧಿಕಾರಿ
SCSP, TSP funds will be allocated for the development of the Scheduled Castes and will be spent in
ಬಳ್ಳಾರಿ 06: ಪರಿಶಿಷ್ಟರ ಆರ್ಥಿಕ ಸ್ಥಿತಿ ಸುಧಾರಣೆಯಾಗಲು, ಅವರ ಪ್ರಮಾಣಕ್ಕನುಸಾರವಾಗಿ ರಾಜ್ಯ ಸರ್ಕಾರವು ಆಯವ್ಯಯದಲ್ಲಿ ವಿಶೇಷ ಅನುದಾನ ಮೀಸಲಿಡಲಾಗುತ್ತಿದ್ದು, ಅಧಿಕಾರಿಗಳು ಅವರಿಗಾಗಿಯೇ ಪೂರ್ಣ ಪ್ರಮಾಣದಲ್ಲಿ ವ್ಯಯಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲೆಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರಿ್ಡಸಿದ್ದ ಜಿಲ್ಲಾ ಮಟ್ಟದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಪ್ರಗತಿ ಪರೀಶೀಲನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ಪರಿಶಿಷ್ಟ ರೈತರ ಮಾಹಿತಿ ನೀಡಬೇಕು. ಕೃಷಿ, ತೋಟಗಾರಿಕೆ ಇಲಾಖೆ ವತಿಯಿಂದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನದಡಿ ಅನುಷ್ಠಾನಗೊಳ್ಳುವ ವಿವಿಧ ಸೌಲಭ್ಯ ಮತ್ತು ಉಪಕರಣಗಳನ್ನು ಯುವ ರೈತರಿಗೆ ವಿತರಿಸಬೇಕು. ಅವರಿಗೆ ಪ್ರೋತ್ಸಾಹ ನೆರವು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇದರ ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿ, ಪ್ರಗತಿ ನಡೆಸಲಾಗುವುದು. ಕೊನೆಯಲ್ಲಿ ರಾಜ್ಯಮಟ್ಟದ ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಕುರಿತು ಪರೀಶೀಲನೆಯಾಗಲಿದೆ. ಹಾಗಾಗಿ ಪೂರಕ ಮಾಹಿತಿ ಇಟ್ಟುಕೊಳ್ಳಬೇಕು ಎಂದು ನೋಡಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಹಂಚಿಕೆ ಮಾಡಿರುವ ಮೊತ್ತವು ಖರ್ಚಾಗದೇ ಉಳಿದ ಸಂದರ್ಭದಲ್ಲಿ ಮಾರ್ಚ್ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಇಲ್ಲವಾದಲ್ಲಿ ಲೆಕ್ಕ ಪರಿಶೋಧನೆಯಾದ ಬಳಿಕ ಅದರ ಮುಂದಿನ ಹಣಕಾಸು ವರ್ಷಕ್ಕೆ ರಾಜ್ಯ ಸರ್ಕಾರದಿಂದ ಸೇರೆ್ಡಯಾಗುತ್ತದೆ. ಆದರೆ ಕೇಂದ್ರದ ಹಣ ಮರಳುವುದಿಲ್ಲ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದರು.
ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅನುಷ್ಠಾನವಾಗುವ ಕಾರ್ಯಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಲ್ಲಿ ಶಿಸ್ತುಕ್ರಮ ಕ್ರಮಕ್ಕೆ ಒಳಪಡುತ್ತಾರೆ ಎಂದು ಅವರು ತಿಳಿಸಿದರು.
ಮುಖ್ಯವಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಒದಗಿಸಿದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ವಿನಿಯೋಗಿಸಬೇಕು. ಅಧಿಕಾರಿಗಳು ತಮ್ಮ ಇಲಾಖೆಗಳಿಗೆ ಒದಗಿಸಿದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಪರಿಶಿಷ್ಟರ ಏಳಿಗೆಗಾಗಿ ತಲುಪಿಸುವಲ್ಲಿ ತೊಂದರೆಗಳಿದ್ದಲ್ಲಿ ತಿಳಿಸಬೇಕು. ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 