ಮಹಿಳೆಯರ ರಕ್ಷಣೆಗಾಗಿ ಮಹಿಳಾ ಆಯೋಗದ ಅಧ್ಯಕ್ಷೆರಿಗೆ ಎಸ್ ಎಫ್ ಐ ದೂರು
SFI complains to the Chairperson of the Women's Commission for the protection of women
ಮಹಿಳೆಯರ ರಕ್ಷಣೆಗಾಗಿ ಮಹಿಳಾ ಆಯೋಗದ ಅಧ್ಯಕ್ಷೆರಿಗೆ ಎಸ್ ಎಫ್ ಐ ದೂರು
ಹಾವೇರಿ 07 : ನಗರಕ್ಕೆ ವಿವಿಧ ಕಾರ್ಯಕ್ರಮಗಳ ಪ್ರಯಕ್ತ ಆಗಮಿಸಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾಽಽ ನಾಗಲಕ್ಷ್ಮೀ ಚೌದರಿ ಅವರಿಗೆ ಪರೀವೀಕ್ಷಣಾ ಮಂದಿರದಲ್ಲಿ ರಂದು ವಿದ್ಯಾರ್ಥಿ ಸಮುದಾಯದ ಪರವಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿಯ ಕಾರ್ಯಕರ್ತರು ಶಾಲಾ-ಕಾಲೇಜ್ ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗಿಲ್ಲ ಸೂಕ್ತ ರಕ್ಷಣೆ ಎಂದು ಆರೋಪಿಸಿ, ಸೂಕ್ತ ರಕ್ಷಣೆ ನೀಡಲು ಮತ್ತು ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣ,ಶಾಲಾ-ಕಾಲೇಜು, ಹಾಸ್ಟೆಲ್ ಕಡೆಗಳಲ್ಲಿ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ಚೂಡಾಯಿಸುವುದು, ರೇಗಿಸುವ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದ್ದು ಒಬ್ಬಂಟಿಯಾಗಿ ಓಡಾಡಲು ವಿದ್ಯಾರ್ಥಿನಿಯರು, ಮಹಿಳೆಯರು ಭಯ ಪಡುವಂತ ವಾತಾವರಣ ನಿರ್ಮಾಣವಾಗಿದೆ.ಮಹಿಳೆಯರ ಮೇಲೆ ಅತ್ಯಾಚಾರ,ದೌರ್ಜನ್ಯ, ಶೋಷಣೆ,ಲೈಂಗಿಕ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಕೃತ್ಯಗಳಿಗೆ ಕಾರಣವಾಗಿವೆ.ಕಾನೂನಾತ್ಮಕವಾಗಿ ಕೇಸ್ ದಾಖಲು ಮಾಡಬೇಕು ಆದರೆ ಕೆಲ ಮನೆತನಗಳಲ್ಲಿ ಹೆಣ್ಣು ಹೊರಗೆ ಓದಲು ಕಳಿಸುವುದ ಕಷ್ಟ ಈ ಸಂದರ್ಭದಲ್ಲಿ ಆ ಮಹಿಳೆ, ವಿದ್ಯಾರ್ಥಿನಿಯರು ಪೋಲಿಸ್ ಠಾಣೆ, ಕೋರ್ಟ್ ಅಂತಾ ಓಡಾಡಲು ಸಾದ್ಯವೇ? ಇಡೀ ಜಿಲ್ಲಾದ್ಯಂತಾ ಪಬ್ಲಿಕ್ ಗಳಲ್ಲಿ ಸಿ ಸಿ ಕ್ಯಾಮರಾಗಳು ಇಲ್ಲ. ಕೆಲವೊಂದು ಕಡೆ ಇದ್ದರೂ ಹೆಸರಿಗೆ ಅಷ್ಟೇ ಕಣ್ಣಿದ್ದು ಕುರುಡುನಂತೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರಿಂದ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಂಡು ವಿದ್ಯಾರ್ಥಿನಿಯರಿಗೆ-ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹಾಗೂ ಕೆಎಸ್‌ಆರ್‌ಟಿಸಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಡಿಡಿಪಿಐ, ಡಿಡಿಪಿಯು ಎಲ್ಲಾ ಶಾಲಾ ಕಾಲೇಜುಗಳಿಗೆ ನೋಟಿಸ್ ಹಾಕಿ ವಿದ್ಯಾರ್ಥಿನಿಯರು ರಕ್ಷಣೆಗಾಗಿ ಸಭೆ,ಕಾರ್ಯಕ್ರಮಗಳು ಆಯೋಜನೆ ಮಾಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸುತ್ತದೆ. ಮನವಿ ಪತ್ರ ಸ್ವೀಕರಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾಽಽ ನಾಗಲಕ್ಷ್ಮೀ ಚೌದರಿ ಮಾತನಾಡಿ ವಿದ್ಯಾರ್ಥಿನಿಯರಿಗೆ,ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಕೂಡಲೇ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.ನೀವು ಸಲ್ಲಿಸಿದ ಇತರೆ ಬೇಡಿಕೆಗಳನ್ನು ನಾಳೆ ನಡೆಯುವ ಪರೀಶೀಲನಾ ಸಭೆಯಲ್ಲಿ ಚರ್ಚೆ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳಲು ನೋಟಿಸ್ ನೀಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಮುಖಂಡರಾದ ಅರುಣ್ ನಾಗವತ,ಚೈತ್ರಾ ಕೊರವರ,ಗಂಗಾ ಯಲ್ಲಪುರ,ಮೇಘನಾ,ಪ್ರಿಯಾಂಕ್ ಝರ್ಪ ಚಂದನ,ಐಶ್ವರ್ಯ ಬಾರ್ಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 