ವಿದ್ಯಾರ್ಥಿನಿಯರ ಹಾಸ್ಟೆಲ್ ಮುಂದೆ ಬಸ್ ನಿಲ್ಲಿಸದ ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲು ಎಸ್‌ಎಫ್‌ಐ ಆಗ್ರಹ
SFI demands action against staff who do not stop buses in front of girls' hostels
ರಾಣೇಬೆನ್ನೂರ 18 : ನಗರದ ಹೊರವಲಯದಲ್ಲಿರುವ ಹಲಗೇರಿ ರಸ್ತೆಯ ಎಸ್.ಆರ್.ಕೆ ಬಡಾವಣೆ ಹತ್ತಿರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಲು, ಆದೇಶ ಉಲ್ಲಂಘನೆ ಮಾಡುವ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಾರಿಗೆ ನಿಯಂತ್ರಣಾಧಿಕಾರಿ ಅವರ ಮೂಲಕ ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ಹೊರವಲಯದಲ್ಲಿ ಬಾಲಕಿಯರ ವಸತಿ ನಿಲಯವಿದ್ದು 150ಕ್ಕೂ ಅಧಿಕ ವಿದ್ಯಾರ್ಥಿನಿಯರು ನಗರದ ವಿವಿಧ ಕಾಲೇಜುಗಳಿಗೆ ಪ್ರತಿನಿತ್ಯ ತೆರಳುತ್ತಾರೆ. ಅಧಿಕೃತವಾಗಿ ಕೋರಿಕೆ ನಿಲುಗಡೆಗೆ ಅವಕಾಶವಿದ್ದು ವಿದ್ಯಾರ್ಥಿನಿಯರನ್ನು ನಗರದ ಕೇಂದ್ರ ಬಸ್ ನಿಲ್ದಾಣದಿಂದ ಹತ್ತಿಸಿಕೊಂಡು ವಸತಿ ನಿಲಯಕ್ಕೆ ನಿಲ್ಲಿಸದೆ 8 ಕಿ ಮೀ ದೂರದ ಹಲಗೇರಿ ಗ್ರಾಮಕ್ಕೆ ಬಿಡುತ್ತಾರೆ ಇಲ್ಲವೇ ನಡು ರಸ್ತೆಯಲ್ಲಿ ಇಳಿಸಿ ಹೋಗುತ್ತಾರೆ. ಈ ರೀತಿಯ ಅಮಾನವೀಯವಾಗಿ ವಿದ್ಯಾರ್ಥಿನಿಯರನ್ನು ಕೆಲ ಕಂಡಕ್ಟರ್ ಹಾಗೂ ಡ್ರೈವರ್ ಗಳು ನಡೆಸಿಕೊಳ್ಳುವ ರೀತಿಯನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ.
ಪ್ರತಿನಿತ್ಯವೂ ನಿಲ್ಲದ ಬಸ್ ಗಳ ಬಸ್ ನಂಬರ್ ಸಮೇತವಾಗಿ ಪೋಟೋ ವಿಡಿಯೋ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಿದರು ಯಾವುದೇ ರೀತಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಅದರಿಂದ ನಿತ್ಯವೂ ಸಮಸ್ಯೆ ಆಗುತ್ತಿದೆ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲು ಹೇಳಿಕೊಂಡರು. ಅಡ್ಡಾಗಟ್ಟಿ ಬಸ್ ನಿಲ್ಲಿಸಿ ಹತ್ತಿದ ವಿದ್ಯಾರ್ಥಿನಿಯರಿಗೆ ಕೆಲ ಕಂಡಕ್ಟರಗಳು ನಮ್ಮ ಬಸ್ ಮಾತ್ರವೇ ಇರೋದಾ? ಬೇರೆ ಬಸ್ ಗೆ ಹೋಗಿ ನಮ್ಮ ಬಸ್ ಹತ್ತಬೇಡಿ ನಿಲ್ಲಿಸಬೇಡಿ ಎಂದು ಇದೆ ಕೊನೆ ಇನ್ನೊಮ್ಮೆ ಈ ರೀತಿ ನಮ್ಮ ಬಸ್ ಗೆ ಬಂದರೆ ಸರಿ ಇರುವುದಿಲ್ಲ ಎಂದು ಕೈ ಮಾಡಿ ದರ್ ತೋರಿದಲ್ಲದೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ವಸತಿ ನಿಲಯದ ವಿದ್ಯಾರ್ಥಿನಿಯರು ದೂರಿದ್ದಾರೆ.
ವಿದ್ಯಾರ್ಥಿನಿಯರು ಇದೆ ಸಮಸ್ಯೆ ಪರಿಹಾರಕ್ಕಾಗಿ ರಸ್ತೆ ತಡೆಮಾಡಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಿ ಅರ್ಧವಾರ್ಷಿಕ ಕಳೆದಿಲ್ಲ ಹೀಗೆ ಪದೇ ಪದೇ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ, ದರ್ಪಕಕೆ ಕೊನೆ ಎಂದು? ಈ ರೀತಿಯ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ಹಲಗೇರಿ ಮಾರ್ಗವಾಗಿ ತೆರಳುವ ಶಿಕಾರಿಪುರ, ರಟ್ಟಿಹಳ್ಳಿ, ಮಾಸೂರ ಹಿರೆಕೇರೂರ, ಅಂತರವಳ್ಳಿ ಸೇರಿದಂತೆ ಎಲ್ಲಾ ಬಸ್ ಗಳು ಕಡ್ಡಾಯವಾಗಿ ನಿಲ್ಲಿಸಲು ಆದೇಶ ಹೊರಡಿಸಬೇಕೆಂದು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಬಸ್ ನಿಲ್ದಾಣ ಬಂದ್ ಮಾಡಲಾಗುವುದು ಎಂದು ಎಸ್‌ಎಫ್‌ಐ ಹಾಸ್ಟೆಲ್ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್ ಆಗ್ರಹಿಸಿದರು.
ವಿದ್ಯಾರ್ಥಿನಿಯರ ಜೊತೆಗೆ ನಿರ್ವಾಹಕರು ಸೌಜನ್ಯದಿಂದ ವರ್ತಿಸುವುದಿಲ್ಲ. ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ವಿದ್ಯಾಭ್ಯಾಸಕ್ಕಾಗಿ ಬಂದಿರುವ ನಾವು ಎಲ್ಲವನ್ನೂ ಸಹಿಸಿಕೊಂಡು ಬಸ್ನಲ್ಲಿ ಪ್ರಯಾಣಿಸುತ್ತಿದ್ದೇವೆ ವಿದ್ಯಾರ್ಥಿನಿಯರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಬುದ್ಧಿವಾದ ಹೇಳಬೇಕು. ಇಲ್ಲದಿದ್ದರೆ ಘಟಕ ವ್ಯವಸ್ಥಾಪಕರ ವಿರುದ್ಧವೂ ಪ್ರತಿಭಟನೆ ನಡೆಸಲಾಗುವುದು ಎಂದು ಹಾಸ್ಟೆಲ್ ವಿದ್ಯಾರ್ಥಿನಿ ದ್ರಾಕ್ಷಯಿಣಿ ಎನ್ ಎಚ್ಚರಿಸಿದರು ವಿದ್ಯಾರ್ಥಿನಿ ಸುನಿತಾ ಹನುಮಪುರ ಮಾತನಾಡಿ, ಅನೇಕ ಬಾರಿ ಮನವಿ ಪತ್ರ ನೀಡಿದ್ದೆವೆ ಅದರ ಪರಿಣಾಮವಾಗಿ ಕೆಲವು ದಿನಗಳ ಕಂಟ್ರೋಲ್ ನೇಮಕ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ,
ಪ್ರತಿದಿನವೂ ನಿಲ್ಲದೆ ಇರುವ ಬಸ್ ಪೋಟೋ, ವಿಡಿಯೋ ಮಾಡಿ ಘಟಕ ವ್ಯವಸ್ಥಾಪಕರು, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕಳಿಸಿದ್ದೆವೆ ಯಾವುದೇ ರೀತಿಯ ಸ್ಪಂದನೆ ಸಿಗದೆ ಅನಿವಾರ್ಯವಾಗಿ ಬೀದಿಯಲ್ಲಿ ನ್ಯಾಯ ಕೇಳುವುದಾಗಿದೆ ಎಂದು ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೀಲಾ ಕೆ, ಸುಮಾ ಎನ್, ಸೌಮ್ಯ ಆರ್ ಕೆ, ಅಶ್ವಿನಿ ಹೆಚ್, ಚೆನ್ನಮ್ಮ ಬಿ ಆರ್, ಐಶ್ವರ್ಯ, ಹೊನ್ನಮ್ಮ, ಚಂದ್ರಲೇಖ, ರಕ್ಷಿತಾ, ಲಮಾಣಿ, ಚಂದ್ರಕಲಾ, ಗೀತಾ, ಜ್ಯೋತಿ, ಮಧುಶ್ರೀ, ಪವಿತ್ರ, ಶೃತಿ, ಶ್ರೀ ಲೇಖ, ಭೂಮಿಕಾ, ನಯನ, ವೀಣಾ ಡಿ, ಲಕ್ಷ್ಮಿ, ರಂಜಿತ, ರೋಜಾ, ಸ್ಪೂರ್ತಿ, ಸುಪ್ರಿತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 