ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಕಡಿವಾಣ ಹಾಕಲು ಎಸ್‌ಎಫ್‌ಐ ಆಗ್ರಹ

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಕಡಿವಾಣ ಹಾಕಲು ಎಸ್‌ಎಫ್‌ಐ ಆಗ್ರಹ SFI demands curb on private school donation racket

ಹಾವೇರಿ 11 : ಹೆಚ್ಚುವರಿ ಡೊನೆಷನ್ ಸುಲಿಗೆ ಮಾಡುವ, ಅನಧಿಕೃತಗಳ ಕಾಲೇಜ್ ಗಳ ಮೇಲೆ ಕ್ರಮಕೈಗೊಳ್ಳಲು ಆಗ್ರಹಿಸಿ ಹಾಗೂ ಶುಲ್ಕ ನಿಯಂತ್ರಣ ಕಾಯ್ದೆ ಸಮರ​‍್ಕ ಜಾರಿಗಾಗಿ ಡೆರಾ ಕಮಿಟಿ ಸಭೆ ಕರೆಯುವಂತೆ ಆಗ್ತಹಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಶಿಕ್ಷಣ ಉಪ ನಿರ್ದೇಶಕ (ಡಿಡಿಪಿಯು) ಅಶೋಕ ಶಾಸ್ತ್ರೀ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. 

ರಾಜ್ಯದಲ್ಲಿ 2026-27ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿವೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಮನಬಂದಂತೆ ವಸೂಲಿ ಮಾಡಲು ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತಮಗೆ ಯಾವುದೇ ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಕ್ರೋಶ ವ್ಯಕ್ತಪಡಿಸಿದರು.   

2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು,  ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರಿ​‍್ಟ.ಇ ಕಾಯ್ದೆಯನ್ನು  ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗುತ್ತಿವೆ. ಡೊನೆಷನ್ ಹಾವಳಿ ವಿರೋಧಿಸಿ, ಡೊನೆಷನ್ ನಿಯಂತ್ರಣಕ್ಕೆ ’ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ ( ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಿ, ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳಬೇಕು. 

ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರಿ​‍್ಟ.ಇ ಕಾಯ್ದೆ ಜಾರಿಯಾದರೂ ಸಮರ​‍್ಕವಾಗಿ ಪಾಲನೆಯಾಗುತ್ತಿಲ್ಲ. ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಹಾಗೂ ಆಕ್ರಮವಾಗಿ ಟ್ಯೂಷನ್, ಟ್ಯೂಟರಿಯಲ್ಸ್‌, ಆನದೀಕೃತವಾಗಿ ಅಖಅ, ಅಃಖಅ ಕೆಲವು ಪ್ರತಿಷ್ಟಿತ ಪಿ.ಯು.ಸಿ ಕಾಲೇಜುಗಳು ಎಇಇ, ಓಇಇಖಿ, ಅಇಖಿ ಹೆಸರಿನಲ್ಲಿ ಶಾಲಾ ಕಾಲೇಜುಗಳು ನಡೆಯುತ್ತಿವೆ. 

ಸರಕಾರ ನಿಯಮಗಳ ಪ್ರಕಾರ ಸರ್ಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಶುಲ್ಕ  (ಡೆವಲಪ್ ಮೆಂಟ್ ಫೀ) ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ, ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ. ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ.  

ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10ಸ16 ಸೈಜಿನಲ್ಲಿ ಫ್ಲೆಕ್ಸ್‌ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ. ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿ.ಐ, ಡಿಡಿಪಿಯು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖಾ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶೀಲನೆ ಮಾಡಿರುವುದಿಲ್ಲ.  

ಇದರಿಂದಾಗಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್‌ ಕಡ್ಡಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕೊಟ್ಟು ಶಾಲೆಗಳನ್ನು ಅಂಗಡಿಯಾಗಿ ಮಾರ​‍್ಪಟಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ ಮತ್ತು ಬಹುತೇಕ ಶಾಲೆಗಳು ಇಲಾಖೆಯ ಆದೇಶವನ್ನು ಉಲ್ಲಂಘಿಸಿದ್ದು, ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅನಧಿಕೃತ ಟ್ಯೂಷನ್ ಸೆಂಟರ್ಗಳನ್ನು ಮುಚ್ಚತಕ್ಕದ್ದು ಮತ್ತು ಈ ಕೂಡಲೇ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆ ಸೇರಿಸಬೇಕೆಂದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಮುಖಂಡ ಅರುಣ್ ನಗವತ್, ಕೃಷ್ಣ ನಾಯ್ಕ್‌, ಶುಂಭು ಸವದತ್ತಿ, ಪರುಶುರಾಮ, ಲೋಕೇಶ್, ಧನುಷ್ ದೊಡ್ಡಮನಿ ಉಪಸ್ಥಿತರಿದ್ದರು.