ಸರ್ಕಾರಿ ಕಾನೂನು ವಿದ್ಯಾಲಯ ಶೀಘ್ರ ಪ್ರಾರಂಭಿಸಲು ಎಸ್‌ಎಫ್‌ಐ ಆಗ್ರಹ
SFI demands early opening of government law school
ಸರ್ಕಾರಿ ಕಾನೂನು ವಿದ್ಯಾಲಯ ಶೀಘ್ರ ಪ್ರಾರಂಭಿಸಲು ಎಸ್‌ಎಫ್‌ಐ ಆಗ್ರಹ
ಹಾವೇರಿ 06: ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ವಿದ್ಯಾಲಯ ಪ್ರಾರಂಭಿಸುವಂತೆ ಒತ್ತಾಯಿಸಿ ಹಾಗೂ ಆಮೆಗತಿ ಕಟ್ಟಡ ನಿರ್ಮಾಣ, ವಿಳಂಬ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿಯು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ.ಎಲ್ ಅವರಿಗೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು. ನೂರಾರು ವಿದ್ಯಾರ್ಥಿಗಳು ಇವತ್ತು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆಯಬೇಕು ಅದರಲ್ಲೂ ವಕೀಲರಾಗಬೇಕೆಂದು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 25 ವರ್ಷ ಕಳೆದರು ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ಬೇರೆ ಬೇರೆ ಜಿಲ್ಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುವಂತಾಗಿದೆ.
ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಖಾಸಗಿ ಕಾನೂನು ಕಾಲೇಜ್ ಇದ್ದು ಅದು ರಾಣೇಬೆನ್ನೂರ ನಲ್ಲಿರುವದರಿಂದ ಬೇರೆ ಬೇರೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸೀಟ್ ಸಿಗದಿರುವುದು ಹಾಗೂ ಸರ್ಕಾರಿ ಶುಲ್ಕ ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾಧ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ ಧಾರವಾಡ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಮೊರೆ ಹೋಗುತ್ತಿದ್ದಾರೆ.ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಎಸ್‌ಎಫ್‌ಐ ಆನೇಕ ವರ್ಷಗಳಿಂದ ಹಾವೇರಿ ಜಿಲ್ಲೆಗೊಂದು ಕಾನೂನು ಕಾಲೇಜು ಮಂಜೂರು ಮಾಡುವಂತೆ ಹೋರಾಟ ಮಾಡುತ್ತಾ ಬಂದಿದ ಹೋರಾಟದ ಪ್ರತಿಫಲವಾಗಿ ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಹಾಗಾಗಿ ಕಾನೂನು ಪದವಿ ಪಡೆಯ ಬಯಸುವ ನೂರಾರು ವಿದ್ಯಾರ್ಥಿಗಳು ಹಾವೇರಿಯಲ್ಲಿ ಸರ್ಕಾರಿ ಕಾಲೇಜ್ ಪ್ರಾರಂಭವಾಗಬಹುದು ಎಂದು ಎದುರು ನೋಡುತ್ತಾ ಕುಳಿತ್ತಿದ್ದಾರೆ. ನೆಲೊಗಲ್ ಗುಡ್ಡದಲ್ಲಿ ಕಟ್ಟಡ ಪ್ರಾರಂಭವಾಗಿದ್ದು, ಅಮೆಗತಿ ಸಾಗುತ್ತಿದೆ ವಿನಹ ತ್ವರಿತವಾಗಿ ನಿರ್ಮಾಣವಾಗುತ್ತಿಲ್ಲ. ಕಾನೂನು ಕಾಲೇಜು ಪ್ರಾರಂಭಿಸುವ ಕುರಿತು ಯಾವುದೇ ರೀತಿಯ ಬೆಳವಣಿಗೆ ಕಂಡು ಬಂದಿರುವುದಿಲ್ಲ. ಆದರಿಂದ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ನಚಿವರು ಈತ ಗಮನಾರ್ಹಸಿ ಪ್ರಸಕ್ತ ವರ್ಷದಲ್ಲೇ ನಗರದ ಮುನ್ಸಿಪಲ್ ಮೈದಾನದ ಹತ್ತಿರದ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಕಾನೂನು ತರಗತಿಗಳನ್ನು ಪ್ರಾರಂಭಿಸುವಂತೆ ಎಸ್‌ಎಫ್‌ಐ ಆಗ್ರಹಿಸುತ್ತದೆ.
ಖಾಸಗಿ ಕಾಲೇಜ್ ಗಳಿಗೆ ಅನುಮತಿ ನೀಡುವ ಸರ್ಕಾರ ತನ್ನದೇ ಸರ್ಕಾರಿ ವಿದ್ಯಾಲಯ ಪ್ರಾರಂಭಿಸಲು ಹಿಂದೇಟು ಹಾಕುವಂತೆ ಕಾಣಲು ಜಮಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ. ಶೀಘ್ರವಾಗಿ ಕಟ್ಟಡ ನಿರ್ಮಾಣ ಮಾಡಿ, ಇಲ್ಲವೇ ಪರ್ಯಾಯವಾಗಿ ಬೇರೆ ಯಾವುದಾದರೂ ಒಂದು ಸರ್ಕಾರಿ ಕಾಲೇಜ್ ಗಳಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಬೇಕು. ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಎಲ್, ನಾಗರಾಜ ಕುರಬಗೊಂಡ, ನೆಹರು ಸೋಮಸಾಗರ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 