ಎಸ್ಕೆಎನ್ಜಿ ಕಾಲೇಜಿನ ಪ್ರಾಧ್ಯಾಪಕ ಗುರಿಕಾರ್ಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್ಗ
SKNG College Professor Gurikar receives Sahitya Sevaratna Samman Award
ಎಸ್ಕೆಎನ್ಜಿ ಕಾಲೇಜಿನ ಪ್ರಾಧ್ಯಾಪಕ ಗುರಿಕಾರ್ಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್ಗ
ಗಂಗಾವತಿ 13 : ನಗರದ ಶ್ರೀ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾಽಽ ಶಿವರಾಜ್ ಜಿ.ಗುರಿಕಾರ್ ಅವರಿಗೆ ಸಾಹಿತ್ಯ ಸೇವಾರತ್ನ ಸಮ್ಮಾನ್ ಅವಾರ್ಡ್ ದೊರೆತಿದೆ. ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಸೆ.17 ರಂದು ದೆಹಲಿ ಕನಸ್ಟೋನ್ ಆಫ್ ಇಂಡಿಯಾದಲ್ಲಿ ಅವಾರ್ಡ್ನ್ನು ಪ್ರಧಾನ ಮಾಡಲಿದ್ದಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಸೇರಿದಂತೆ ಬಹುಭಾಷೆಯಲ್ಲಿ ಗುರಿಕಾರ್ ಅವರು ಅನೇಕ ಲೇಖನಗಳನ್ನು ಬರೆದಿದ್ದಾರೆ. ಯಲಬುರ್ಗಾ ಸರಕಾರದ ಪದವಿ ಮಹಾವಿದ್ಯಾಲಯದಲ್ಲಿ ಹತ್ತು ವರ್ಷ ಸೇವೆ ಸಲ್ಲಿಸಿ ಪ್ರಭಾರಿ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರಲ್ಲದೇ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಕನ್ನಡದ ಸೇವೆ ಮಾಡಿದ್ದಾರೆ. ಎರಡು ಕವನ ಸಂಕಲನ ಮತ್ತು ಎರಡು ಭೌತಶಾಸ್ತ್ರದಲ್ಲಿ ಸಂಶೋಧನಾ ಪುಸ್ತಕಗಳನ್ನು ಹೊರ ತಂದಿದ್ದಾರೆ. ಬೀಚಿ ಬಳಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ ಹೆಚ್ಚಿನ ಅನುಭವ ಹೊಂದಿದ್ದಾರೆ. ಇವರ ಸಾಹಿತ್ಯ, ಶಿಕ್ಷಣ ಮತ್ತಿತರ ಸೇವೆಯನ್ನು ಗುರುತಿಸಿ ಸಾಹಿತ್ಯ ಸೇವಾರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಗೆ ಭಾಜನರಾಗಿರುವ ಸಹ ಪ್ರಾಧ್ಯಾಪಕ ಡಾಽಽ ಶಿವರಾಜ ಗುರಿಕಾರ್ ಅವರನ್ನು ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ವೃಂದ ಮತ್ತು ಅಭಿಮಾನಿ ಬಳಗ ಅಭಿನಂದಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 