ಸಂಗನಬಸವೇಶ್ವರ ಪ್ರೌಢ ಶಾಲೆಯ ಗಣಿತ ಶಿಕ್ಷಕರಾದ ಎಸ್ ಎಂ ಚೌವ್ಹಾಣ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

SM Chouvhana, Mathematics Teacher of Sanganabasaveshwara High School, was selected for the Best Tea

ಸಂಗನಬಸವೇಶ್ವರ ಪ್ರೌಢ ಶಾಲೆಯ ಗಣಿತ ಶಿಕ್ಷಕರಾದ ಎಸ್ ಎಂ ಚೌವ್ಹಾಣ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ತಾಂಬಾ 22 :  ಗ್ರಾಮದ  ಸಂಗನಬಸವೇಶ್ವರ ಪ್ರೌಢ ಶಾಲೆಯ ಗಣಿತ ಶಿಕ್ಷಕರಾದ ಎಸ್ ಎಂ ಚೌವ್ಹಾಣ ಅವರು 2024-25ನೇ ಸಾಲಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಜಯಪುರ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರನ್ನು ದಿ.25 ರಂದು ವಿಜಯಪುರ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹಾಸಿಂಪೀರ ವಾಲಿಕಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರಿಗೆ ತಾಂಬಾ ಹೋಬಳಿಯ ಕಸಾಪ ಅಧ್ಯಕ್ಷರಾದ ಲಕ್ಷ್ಮಣ ಹಿರೇಕುರುಬರ್ ಅವರು ಅಭಿನಂದಿಸಿದ್ದಾರೆ.