ಎಸ್‌ಎಸ್‌ಕೆ ಸಮಾಜ ಹಿಂದುತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ : ಕಿರಣ ಭೂಮಾ
SSK played a major role in strengthening social Hindutva: Kiran Bhuma
ಎಸ್‌ಎಸ್‌ಕೆ ಸಮಾಜ ಹಿಂದುತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ : ಕಿರಣ ಭೂಮಾ
ಗದಗ 24: ನಾಡಿನ ದಸರಾ ಹಬ್ಬವನ್ನು ಮೈಸೂರ, ಮಂಗಳೂರು ನಂತರ ಗದುಗಿನಲ್ಲಿ ಎಸ್‌ಎಸ್‌ಕೆ ಸಮಾಜದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ದತ್ತಾ ಡೆವಲಪರ್ಸನ ವ್ಯವಸ್ಥಾಪಕ ನಿರ್ದೇಶಕರಾದ ಕಿರಣ ಭೂಮಾ ಅವರು ಹೇಳಿದರು.
ನಗರದ ಹಳೇ ಸರಾಪ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರ್ಬಾರ ವೇದಿಕೆಯಲ್ಲಿ ಜರುಗಿದ ನಮ್ಮೂರ ದಸರಾ-2025 ರ ಎರಡನೆ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿ, ಎಸ್‌ಎಸ್‌ಕೆ ಸಮಾಜದ ಬಾಂಧವರ ಶಿಸ್ತು, ಸಂಯಮ, ಬದ್ದತೆ, ಒಕ್ಕಟ್ಟು ನೋಡಿದರೆ ಹೆಮ್ಮೆ ಎನಿಸುತ್ತದೆ. ಅಧುನಿಕ ಯುಗದಲ್ಲಿ ಮೋಬೈಲ್ ಹಾಗೂ ಪಾಶ್ಚಮಾತ್ಯ ಸಂಸ್ಕೃತಿಗೆ ನಮ್ಮ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರು ಹೋಗುತ್ತಿರುವ ಇಂದಿನ ದಿನಗಳಲ್ಲಿ ಎಸ್.ಎಸ್.ಕೆ. ಸಮಾಜದವರು ಹಿಂದುತ್ವ ರಕ್ಷಣೆ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವರಲ್ಲಿ ಪ್ರಮುಖರಾಗಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶರಣಬಸಪ್ಪ (ರಾಜು) ಗುಡಿಮನಿ ಅವರು ಮಾತನಾಡಿ, ಎಸ್‌ಎಸ್‌ಕೆ ಸಮಾಜದವರು ಶ್ರಮಜೀವಿಗಳು ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಜೀವನದಲ್ಲಿ ಬರಿ ಹಣ ಗಳಿಸುವುದು ಮುಖ್ಯವಲ್ಲ ದಾನ-ಧರ್ಮಗಳನ್ನು ಮಾಡುವ ಮೂಲಕ ಹಿರಿಯ ಜೀವಿಗಳು ಹಾಗೂ ಕುಟುಂಬದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಬಾಳಬೇಕು ಎಕೆಂದರೆ ಹಣ ಗಳಿಸುವ ಬರದಲ್ಲಿ ಕುಟುಂದವರಿಗೆ ಸಮಯ ಮೀಸಲಿಡದೆ ಒತ್ತಡದಲ್ಲಿ ಬದುಕುತ್ತಿದ್ದೆವೆ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದತ್ತಾ ಡೆವಲಪರ್ಸ ನಿರ್ದೇಶಕರಾದ ಎಸ್.ಎಚ್. ಶಿವನಗೌಡ್ರ ಅವರು ಸಾಂದರ್ಭಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಎಸ್‌ಎಸ್‌ಕೆ ಸಮಾಜದ ಪಂಚ ಕಮೀಟಿ ಅಧ್ಯಕ್ಷ ಫಕೀರಸಾ ಬಾಂಡಗೆ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆ ಮೇಲೆ ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ರವಿ ಶಿದ್ಲಿಂಗ, ದಸರಾ ಕಮೀಟಿ ಚೇರಮನ್ ಅನಿಲ್ ಖಟವಟೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂಚ ಕಮೀಟಿ ಸದಸ್ಯರಾದ ಎನ್. ಆರ್. ಖಟವಟೆ, ವಿಶ್ವನಾಥಸಾ ಖಟವಟೆ, ಸುರೇಶಕುಮಾರ ಬದಿ, ಬಲರಾಮ ಬಸವಾ, ಪರಶುರಾಮ ಬದಿ, ವಿಷ್ಣುಸಾ ಶಿದ್ಲಿಂಗ, ಮಾರುತಿ ಪವಾರ, ಪ್ರಕಾಶ ಬಾಕಳೆ, ಅಂಬಾಸಾ ಖಟವಟೆ, ಮೋತಿಲಾಲಸಾ ಪೂಜಾರಿ, ವಿನೋದ ಬಾಂಡಗೆ, ತರುಣ ಸಂಘದ ವಿಶ್ವನಾಥಸಾ ಸೂಳಂಕಿ, ರಾಘು ಬಾರಡ, ಶ್ರೀಕಾಂತ ಬಾಕಳೆ, ಮಾಧು ಬದಿ, ನಾಗರಾಜ ಖೋಡೆ, ಶ್ರೀನಿವಾಸ ಬಾಂಡಗೆ, ಸುಧೀರ ಕಾಟಿಗರ, ಮಹಿಳಾ ಮಂಡಳದ ಅಧ್ಯಕ್ಷೆ ಉಮಾಬಾಯಿ ಬೇವಿನಕಟ್ಟಿ, ಸ್ನೇಹಲತಾ ಕಬಾಡಿ, ಗೀತಾಬಾಯಿ ಹಬೀಬ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀನಿವಾಸ ಬಾಂಡಗೆ ಸ್ವಾಗತಿಸಿದರು. ಜಿ.ಎನ್.ಹಬೀಬ ಅವರು ನಿರೂಪಿಸಿದರು. ಗಂಗಾಧರ ಹಬೀಬ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 