ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-1ರ ಫಲಿತಾಂಶ ವಿಶ್ಲೇಷಣೆ ಸಭೆ
SSLC Pre-Preparation Exam-1 Result Analysis Meeting
ಕೊಪ್ಪಳ 23: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-1ರ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳ ಸಮೀಪಕ್ಕೆ ಬಂದು ಅನುತ್ತೀರ್ಣರಾಗಿರುವ ಮಕ್ಕಳಿಗೆ ಮತ್ತಷ್ಟು ಕಾಳಜಿವಹಿಸಿ, ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ವಿಶೇಷ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-1ರ ಫಲಿತಾಂಶ ವಿಶ್ಲೇಷಣೆ ಕುರಿತು ದತ್ತು ಶಾಲಾ ನೋಡಲ್ ಅಧಿಕಾರಿಗಳಿಗೆ ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-1 ರಲ್ಲಿ ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ‘40 ಪ್ಲಸ್' ಕಾರ್ಯಕ್ರಮದಡಿ ವಿಶೇಷ ಒತ್ತು ನೀಡಿ, ಫಲಿತಾಂಶ ಸುಧಾರಣೆಗೆ ಕ್ರಮವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ಹೆಚ್ಚಾಗಿ ಭೇಟಿ ನೀಡಿ, ಅನುತ್ತೀರ್ಣರಾದ ಮಕ್ಕಳ ಬಗ್ಗೆ ವಿಷಯವಾರು ಹೆಚ್ಚು ಕಾಳಜಿವಹಿಸಬೇಕಿದ್ದು, ಈ ಬಗ್ಗೆ ಶಾಲಾ ಮುಖ್ಯಗುರುಗಳು ಮತ್ತು ಆಯಾ ವಿಷಯ ಶಿಕ್ಷಕರಿಗೆ ಅಗತ್ಯ ಕ್ರೀಯಾ ಯೋಜನೆ ರೂಪಿಸಲು ಮಾರ್ಗದರ್ಶನ ಮಾಡಬೇಕು. ಜಿಲ್ಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಎಲ್ಲಾ ದತ್ತು ಶಾಲಾ ನೋಡಲ್ ಅಧಿಕಾರಿಗಳು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜನವರಿ 27 ರಿಂದ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ-2 ಆರಂಭಗೊಳ್ಳಲಿದ್ದು, ಶಿಕ್ಷಣ ಇಲಾಖೆ ನೀಡಿದ ಪರೀಕ್ಷಾ ಎಸ್.ಒ.ಪಿ ಪ್ರಕಾರ ಸಮಯ ಬದಲಾವಣೆಯನ್ನು ಅನುಸರಿಸಿ ಪರೀಕ್ಷೆಯನ್ನು ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕಡ್ಡಾಯವಾಗಿ ಪರೀಕ್ಷಾ ನಿಯಮಗಳನ್ನು ಪಾಲಿಸಿ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಬೇಕು. ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮತ್ತು ಅವುಗಳ ಗೌಪ್ಯತೆಯನ್ನು ಕಾಪಾಡಿಕೊಂಡು ಸುಗಮವಾಗಿ ಪರೀಕ್ಷೆಗಳನ್ನು ನಡೆಸುವಂತೆ ಆಯಾ ಶಾಲೆಗಳ ಮುಖ್ಯಗುರುಗಳು ಕ್ರಮ ಕೈಗೊಳ್ಳಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್ ಅವರು ಮಾತನಾಡಿ, ಒಟ್ಟು ಜಿಲ್ಲೆಯಲ್ಲಿ 32 ಜನ ನೋಡಲ್ ಅಧಿಕಾರಿಗಳಿಗೆ ತಲಾ 10 ಶಾಲೆಗಳಂತೆ ದತ್ತು ನೀಡಲಾಗಿದ್ದು, ನೋಡಲ್ ಅಧಿಕಾರಿಗಳು ಆಯಾ ಶಾಲೆಗಳಿಗೆ ಭೇಟಿ ನೀಡಿ, ತಮಗೆ ದತ್ತು ನೀಡಿದ ಶಾಲೆಗಳ ಫಲಿತಾಂಶ ಶೇ 95ಕ್ಕಿಂತ ಹೆಚ್ಚು ಬರುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಡಯೆಟ್ ಪ್ರಾಂಶುಪಾಲರಾದ ಅನಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರು, ವಿಷಯ ಪರೀವೀಕ್ಷಕರು, ಬಿ.ಆರ್.ಸಿ.ಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 