ಸದಲಗಾ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

Sadalaga Municipality under Congress's wing

ಸದಲಗಾ ಪುರಸಭೆ ಕಾಂಗ್ರೆಸ್ ತೆಕ್ಕೆಗೆ  

ಚಿಕ್ಕೋಡಿ 10: ತಾಲೂಕಿನ ಸದಲಗಾ ಪುರಸಭೆಗೆ ಸೋಮವಾರ ನಡೆದ ಎರಡನೆ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮತ್ತು ಶಾಸಕ ಗಣೇಶ ಹುಕ್ಕೇರಿ ಸಮ್ಮುಖದಲ್ಲಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಹೋಗಿದೆ. ಪುರಸಭೆಯು 23 ಸದಸ್ಯರ ಬಲ ಹೊಂದಿದೆ. 11 ಬಿಜೆಪಿ ಬೆಂಬಲಿತ, 10 ಕಾಂಗ್ರೆಸ್ ಮತ್ತು ಇಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರು ಇದ್ದರು. ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲ ಅವಕಾಶ ಬಿಜೆಪಿಗೆ ಇದ್ದರೂ ಚುನಾವಣೆ ಕಣದಿಂದ ಬಿಜೆಪಿ ಸದಸ್ಯರು ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಕಾಂಗ್ರೆಸ್ ಬೆಂಬಲಿತ ಬಸವರಾಜ ಅಣ್ಣಾಸಾಹೇಬ ಗುಂಡಕಲ್ಲೆ ಅಧ್ಯಕ್ಷರಾಗಿ ಮತ್ತು ಶ್ರೀಮತಿ ವಿಜಯಲಕ್ಷ್ಮೀ ಸಂತೋಷ ನವಲೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಸಂಸದೆ ಪ್ರಿಯಂಕಾ ಜಾರಕಿಹೊಳಿ, ಶಾಸಕ ಗಣೇಶ ಹುಕ್ಕೇರಿ ಅವರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೂಗೂಚ್ಚ ನೀಡಿ ಸನ್ಮಾನಿಸಿದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ ಸಿ.ಎಸ್‌.ಕುಲಕರ್ಣಿ ಕಾರ್ಯನಿರ್ವಹಿಸಿದರು.