ವಸತಿ ನಿಲಯದಲ್ಲಿ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿನೀಯರಿಗೆ ಸುರಕ್ಷಿತ ಭದ್ರತೆ: ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಆಗ್ರಹ
Safe and secure accommodation for students studying in the hostel: AIDSO student demand
ಕೊಪ್ಪಳ 28: ವಸತಿ ನಿಲಯದಲ್ಲಿ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿನೀಯರಿಗೆ ಸುರಕ್ಷಿತ ಭದ್ರತೆ ಮತ್ತು ಮೌಲ್ಯ ಶಿಕ್ಷಣವನ್ನು ಒದಗಿಸಲು ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆ ಆಗ್ರಹ. ಇತ್ತೀಚಿನ ದಿನಗಳಲ್ಲಿ ಕೊಪ್ಪಳದಲ್ಲಿನ ವಸತಿ ನಿಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳ ಅಧ:ಪತನದಿಂದಾಗಿ ಬಾಲ್ಯದಲ್ಲೇ ಗರ್ಭದಾರಣೆಯ ಘಟನೆಗಳು ಮತ್ತು ಅತ್ಯಾಚಾರದ ಘಟನೆಗಳು ನಡೆಯುತ್ತಿವೆ. ಅದೇ ರೀತಿ ನಿನ್ನೆ ಬುಧವಾರ ಜಿಲ್ಲೆಯ ಕುಕನೂರ ತಾಲ್ಲೂಕಿನ ಇಟಗಿ ಗ್ರಾಮದ ವಸತಿ ನಿಲಯದಲ್ಲಿ ಘಟನೆಯು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನೀಯರಿಗೆ ರಕ್ಷಣೆ ಇಲ್ಲದಿರುವುದು ಹಾಗೂ ಸರ್ಕಾರಗಳ ನಿರ್ಲಕ್ಷ ಮತ್ತು ವಿದ್ಯಾರ್ಥಿಗಳಿಗೆ ನೀಡುವ ಮೌಲ್ಯ ರಹಿತ ಶಿಕ್ಷಣ ಇದರ ಪ್ರಮುಖ ಕಾರಣವಾಗಿದೆ. ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿಗೆ ಹೆರಿಗೆ ಆಗಿರುವ ಘಟನೆ ನಡೆದಿರುವುದು ಜಿಲ್ಲೆಯು ಪ್ರಗತಿ ಪರವಾಗದೆ ಸಾಂಸ್ಕೃತಿಕ ಅಧ:ಪತನದತ್ತ ಸಾಗುತ್ತಿರುವುದು ದುಃಖದ ಸಂಗಾತಿಯಾಗಿದೆ.
ಜಿಲ್ಲೆಯ ವಸತಿ ನಿಲಯಗಳಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳು ಜನ್ಮ ನೀಡುತ್ತಿರುವುದು ಮತ್ತು ಅತ್ಯಾಚಾರದಂತ ಘಟನೆಗಳು ಕಂಡು ಬರುತ್ತಿವೆ. ಇದು ಆಡಳಿತದ ವೈಫಲ್ಯ ಹಾಗೂ ವಸತಿ ನಿಲಯಗಳು ಹೆಣ್ಣುಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಗಂಭೀರ ಪ್ರಶ್ನೆಗಳನ್ನೆತ್ತಿದೆ. ಸದ್ಯದ ಪ್ರಕರಣದಲ್ಲಿ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿಯ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಕೂಡಲೇ ಎಚ್ಚೆತ್ತು, ಮುಂದಿನ ದಿನಗಳಲ್ಲಿ ಈ ರೀತಿ ಘಟನೆಗಳು ಸಂಭವಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪಾರದ ನಡೆದ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕಿಂತ ಈ ರೀತಿಯ ಅಪರಾಧಗಳು ನಡೆಯದಂತೆ ಕಾನೂನು ಮತ್ತು ಮೌಲ್ಯ ಶಿಕ್ಷಣಕ್ಕೆ ಸರಕಾರ ಮತ್ತು ಜಿಲ್ಲಾಡಳಿತವು ಮುಂದಾಗಬೇಕು. ಪ್ರಸ್ತುತ ಘಟನೆಗೆ ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಎ.ಐ.ಡಿ.ಎಸ್.ಓ ಕೊಪ್ಪಳ ಜಿಲ್ಲಾ ಸಮಿತಿ ಅಗ್ರಹಿಸುತ್ತದೆ. ಹೇಳಿಕೆ ಇವರಿಂದ, ಗಂಗರಾಜ ಅಳ್ಳಳ್ಳಿ ಂಋಖಓ ಜಿಲ್ಲಾ ಸಂಚಾಲಕರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 