ಡಾ.ಹಣಮಂತಪ್ಪ ನಡುವಿನಕೇರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ
Sahitya Siri award to Dr. Hanamanthappa Anitakeri
ಡಾ.ಹಣಮಂತಪ್ಪ ನಡುವಿನಕೇರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ
ತಾಳಿಕೋಟಿ, 31 : ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಸಂಗಮೇಶ್ವರ ವಿದ್ಯಾಸಂಸ್ಥೆ ಯ ಶ್ರೀ ಎಚ್‌ಎಸ್ ಪಾಟೀಲ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ, ಸಾಹಿತಿ ಡಾ.ಎಚ್.ಬಿ. ನಡುವಿನಕೇರಿ ಇವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇತ್ತೀಚೆಗೆ ಬಸವಕಲ್ಯಾಣ ತಾಲೂಕಿನ ತಾಡೋಣದಲ್ಲಿ ಶ್ರೀ ಎಲ್ಲಾ ಲಿಂಗೇಶ್ವರ ಟ್ರಸ್ಟ್ (ರಿ) ಸಸ್ತಾಪುರ ಇವರು ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ 39ನೇ ಪುಣ್ಯ ಸ್ಮರಣೋತ್ಸವ, ಬಾಲತಪಸ್ವಿ ಮಹಾದೇವಿಯವರ 60ನೇ ಹುಟ್ಟುಹಬ್ಬ ಹಾಗೂ ತುಲಾಭಾರ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಪ್ರಥಮ ಮಹಿಳಾ ಸಮಾವೇಶದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಈ ಸಾಧನೆಗೆ ಶ್ರೀ ಶಿವಯೋಗಿ ಸಂಗಮಾರ್ಯ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲ, ಕಾರ್ಯದರ್ಶಿ ಸಚಿನ್ ಎಚ್.ಪಾಟೀಲ, ಎಲ್ಲ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 