ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ಸಾಯಿನಿಧಿ ರವಿವರ್ಮ : ಸಾಧನೆಗೆ ಪ್ರಶಂಸೆ
ಕಂಪ್ಲಿ 26: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ಕಂಪ್ಲಿ ಪಟ್ಟಣದ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡುವ ಮೂಲಕ ಶಿಕ್ಷಣ ಪ್ರೇಮಿಗಳ ಮನ ಗೆದ್ದಿದ್ದಾರೆ. ಇಲ್ಲಿನ ಬಳ್ಳಾರಿ ನಗರದ ಸಂತ್‌ಜಾನ್ಸ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಪಂ, ಶಾಲಾ ಶಿಕ್ಷಣ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲ್ಲೋತ್ಸವ ಸ್ಪರ್ಧೆಯಲ್ಲಿ ವಿದ್ಯಾಸಾಗರ ಶಾಲೆಯ ಸಾಯಿನಿಧಿ ರವಿವರ್ಮ ಎಂಬ ವಿದ್ಯಾರ್ಥಿನಿ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಎಸ್.ಚೈತನ್ಯ ಎಂಬ ವಿದ್ಯಾರ್ಥಿನಿ ಜಾನಪದ ಗೀತೆ ಗಾಯನದಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಜಿಯಾ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಹೀಗೆ ಜಿಲ್ಲಾ ಮಟ್ಟದಲ್ಲಿ ಸಾಧನೆ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿನಿಯರ ಸಾಧನೆಗೆ ವಿದ್ಯಾಸಾಗರ ಶಾಲೆಯ ಪ್ರಾಚಾರ್ಯ ಪಿ.ನಾಗೇಶ್ವರರಾವ್, ಉಪ ಪ್ರಾಚಾರ್ಯ ಸಾಯಿ ಕಿಶೋರ್ ಹಾಗೂ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.