ಧರ್ಮಸ್ಥಳ ಅಪಪ್ರಚಾರದ ವಿರುದ್ದ ಸಂದೀಪ್ ಪಾಟೀಲ್ ಆಕ್ರೋಶ
Sandeep Patil's outcry against Dharmasthala propaganda
ಧರ್ಮಸ್ಥಳ ಅಪಪ್ರಚಾರದ ವಿರುದ್ದ ಸಂದೀಪ್ ಪಾಟೀಲ್ ಆಕ್ರೋಶ
ವಿಜಯಪುರ, 30 ; ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿರುತ್ತದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಕೃತ್ಯಗಳು ಯಾರು? ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಿಲ್ಲ.
ಆದುದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇವೆ. ಪತ್ರಿಕಾ ಪ್ರಕರಣದ ಮೂಲಕ ನಗರ ಅಧ್ಯಕ್ಷರಾದ ಸಂದೀಪ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 