ಶಾಂತಿನಿಕೇತನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಬಳ್ಳಾರಿ 09: ನಗರದಲ್ಲಿ ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯವೆಂದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ರೆಡ್ಡಿ ಜನಸಂಘದ ಜಿಲ್ಲಾ ಅಧ್ಯಕ್ಷರಾದ ನಾರಾ ಪ್ರತಾಪ ರೆಡ್ಡಿಯವರು ಅಭಿಪ್ರಾಯಪಟ್ಟರು.
ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಇಂದು ಜರುಗಿದ ರೆಡ್ಡಿ ಜನಸಂಘದ ಶಾಂತಿನಿಕೇತನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಮ್ಮ ಸಂಸ್ಥೆಯು ಮಕ್ಕಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಬೆಳವಣಿಗೆಗೆ ಉತ್ತೇಜನ ನೀಡುವ ಮೂಲಕ ಜನಸಾಮಾನ್ಯರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂದರು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅವರಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ದೇಶದ ಉತ್ತಮ ನಾಗರೀಕರಾಗಿ ರೂಪಗೊಳ್ಳಲು ಸಾಧ್ಯ ಆ ನಿಟ್ಟಿನಲ್ಲಿ ಶಾಂತಿನಿಕೇತನ ಪ್ರೌಢಶಾಲೆಯು ಸದಾ ಶ್ರಮಿಸುತ್ತಿದೆ ಎಂದರು.ಸಂಸ್ಥೆಯ ಕಾರ್ಯದರ್ಶಿಗಳಾದ ಬಿ ತಿಮ್ಮಾರೆಡ್ಡಿಯವರು ಮಾತನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂದು ಮಕ್ಕಳು ಶಿಕ್ಷಣದ ಜೊತೆಗೆ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ, ಈ ನಿಟ್ಟಿನಲ್ಲಿ ನಮ್ಮ ಶಾಲೆಯ ಮುಖ್ಯ ಗುರುಗಳನ್ನೊಗೊಂಡಂತೆ ಎಲ್ಲಾ ಶಿಕ್ಷಕರು ಪೂರ್ವ ಪ್ರಾಥಮಿಕದಿಂದ ಹಿಡಿದು ಪ್ರೌಢಶಾಲಾ ಹಂತದ ಎಲ್ಲಾ ಮಕ್ಕಳ ಸಮಗ್ರ ಶೈಕ್ಷಣಿಕ ಬೆಳವಣಿಗೆಗೆ ಒತ್ತು ನೀಡುತ್ತಿದ್ದಾರೆ.
ಇಂದು ಶಿಕ್ಷಣವೂ ದುಬಾರಿಯಾಗಿರುವ ಸಂದರ್ಭದಲ್ಲಿ ನಮ್ಮ ವಿದ್ಯಾಸಂಸ್ಥೆಯು ಬಡ ಮತ್ತು ಮಧ್ಯಮ ವರ್ಗದ ಪೋಷಕರನ್ನು ಗಮನದಲ್ಲಿ ಇಟ್ಟುಕೊಂಡು ಕಡಿಮೆ ಶುಲ್ಕದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣವ ನೀಡುತ್ತಿದೆ ಎಂದು ತಿಳಿಸಿದರು. ಸಂಸ್ಥೆಯ ಕೋಶಾಧ್ಯಕ್ಷರಾದ ಹೇಮಚಂದ್ರ ರೆಡ್ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರುಗಳಾದ ಕೆ ಶೋಭಾ ಅವರು ಶಾಲಾ ವಾರ್ಷಿಕ ವರದಿ ವಾಚನ ಮಾಡಿದರು.
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.ಶಾಂತಿನಿಕೇತನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು. ಈ ಸಂದರ್ಭದಲ್ಲಿ ಕಸಪ ಜಿಲ್ಲಾಧ್ಯಕ್ಷರಾದ ನಿಷ್ಠಿ ರುದ್ರ್ಪ ರವರು ಕೆ.ಸಿ. ಶೋಭಾ ಕಾರ್ಯಕ್ರಮ ನಿರೂಪಿಸಿದರು. ಪಿ ಸ್ವಾತಿ ಸ್ವಾಗತಿಸಿ ವಂದನಾರೆ್ಣ ಸಲ್ಲಿಸಿದರು.