ನರೇಗಾ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ರೋಣ 04 : ಪಸ್ತುತಃ ದಿನಮಾನದಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೆ?ಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಅಭಿಪ್ರಾಯಪಟ್ಟರು.ತಾಲೂಕ ಪಂಚಾಯತ ಎದುರಗಡೆ ನರೇಗಾ ದಿನಾಚರಣೆ ಪ್ರಯುಕ್ತ 40 ಕ್ಕೂ ಹೆಚ್ಚು ಸಸಿ ನೆಡುವ ಮೂಲಕ ನರೇಗಾ ದಿನಾಚರಣೆ ಯನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಈ ಹಿನ್ನೆಲೆ ಪುಣ್ಯ ಪುರುಷರ ದಿನಾಚರಣೆ ಹಾಗೂ ಇಂತಹ ವಿಶೇಷ ದಿನಾಚರಣೆ ವೇಳೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರಕ್ಕೆ ನಮ್ಮದೆ ಆದ ಕೊಡುಗೆ ನೀಡುವದು ನಮ್ಮ ಆದ್ಯತೆಯಾಗಬೇಕು ಎಂದರು..ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಗ್ರಾಮ ಪಂಚಾಯತಿ ಪಿಡಿಓ, ಡಿಇಒ, ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸಹ ಹಾಜರಿದ್ದರು