ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್‌: ಡಾ.ಧೂಪಂ ಸತೀಶ್

 ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್‌: ಡಾ.ಧೂಪಂ ಸತೀಶ್ Sardar Vallabhbhai Patel is the father of integration: Dr. Dhoopam Satish

 

ಬಳ್ಳಾರಿ 31: ಸ್ವತಂತ್ರ ಭಾರತ ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆಗಿದ್ದರು. ಅವರ ಜನ್ಮ ವಾರ್ಷಿಕೋತ್ಸವವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಧೂಪಂ ಸತೀಶ್ ಅವರು ಹೇಳಿದರು. 

ಕೇಂದ್ರ ಸಂವಹನ ಇಲಾಖೆ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ವಿದ್ಯಾಲಯದ ಭಾರತ್ ಸ್ಕೌಟ್ಸ್‌ ಅಂಡ್ ಗೈಡ್ಸ್‌ ವಿಭಾಗದ ರೇಂಜರ್ ಯೂನಿಟ್ ಮತ್ತು ರಾಜ್ಯಶಾಸ್ತ್ರ ವಿಭಾಗ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮತನಾಡಿದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ವ್ಯಕ್ತಿ ಮತ್ತು ಭಾರತದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವ ಆಗಿದ್ದರು ಎಂದು ಸ್ಮರಿಸಿದರು. ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ರಾಮಕೃಷ್ಣ ಅವರು ರಾಷ್ಟ್ರೀಯ ಏಕತಾ ದಿನಾಚರಣೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾ ವಿಧಿಯನ್ನು ರೇಂಜರ್ ಲೀಡರ್ ಡಾಕ್ಟರ್ ಮಂಗಳ ಬಿ.ಎನ್ ಅವರು ಭೋದಿಸಿದರು. 

ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರಿ​‍್ಡಸಲಾಗಿತ್ತು. ತೀರ​‍್ುಗಾರರಾಗಿ ಆಂಗ್ಲ ವಿಭಾಗದ ಉಪನ್ಯಾಸಕರಾದ ನೇತ್ರಾವತಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ  ಸೌಮ್ಯ.ಐ., ಶೇಕ್ ಯಾಸ್ಮಿನ್, ಪೂರ್ಣಿಮಾ ಅವರು ಕಾರ್ಯ ನಿರ್ವಹಿಸಿದರು. ಬಳಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಂತರ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬಳ್ಳಾರಿಯ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ರೇಂಜರ್ ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥ ನಡೆಯಿತು. 

ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ.ಸಾಯಿದಾ ತನ್ವೀರ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸುಂದರಮೂರ್ತಿ.ಟಿ., ಇತಿಹಾಸ ವಿಭಾಗದ ಮುಖ್ಯಸ್ಥ ರಾಮಲಿಂಗ.ಟಿ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ.ವೈ., ಬಿಸಿಎ ವಿಭಾಗದ ಮುಖ್ಯಸ್ಥರಾದ ಶೇಕ್ ಯಾಸ್ಮೀನ್, ಎನ್‌ಎಸ್‌ಎಸ್ ಅಧಿಕಾರಿ ಚೋಳೇಂದ್ರ ಭೂಪಾಲ್ ಸೇರಿದಂತೆ ಎಲ್ಲಾ ವಿಭಾಗದ ಉಪನ್ಯಾಸಕರು ಮತ್ತು ರೇಂಜರ್ ವಿದ್ಯಾರ್ಥಿನಿಯರು ಇತರರು ಉಪಸ್ಥಿತರಿದ್ದರು. ಬಿಎ ವಿಭಾಗದ ವಿದ್ಯಾರ್ಥಿನಿ ಕೆ.ಎಂ.ಚೈತನ್ಯ ಪ್ರಾರ್ಥನ ಗೀತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿನಿ ದುರ್ಗಮ್ಮ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಕುಪ್ಪಗಲ್ ಅಖಿಲ ಅವರು ವಂದನಾರೆ​‍್ಣ ಮಾಡಿದರ