ಕರಾವಳಿ ಉತ್ಸವದಲ್ಲಿ ಹೆಲಿಕ್ಯಾಪ್ಟರ್ ಜಾಲಿ ರೈಡ್ಗೆ ಸತೀಶ್ ಕೆ. ಸೈಲ್ ಚಾಲನೆ
Satish K. Sail drives the helicopter jolly ride at the Coastal Festival
ಕಾರವಾರ. ಡಿ.24 : ಕರಾವಳಿ ಉತ್ಸವದ-2025 ರ ಅಂಗವಾಗಿ ಹೆಲಿಕ್ಯಾಪ್ಟರ್ ಜಾಲಿ ರೈಡ್ಗೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಕರ್ನಾಟಕ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹೇಲಿಕ್ಯಾಪ್ಟರ್ ಜಾಲಿ ರೈಡ್ ನಡೆಸಲು ತಹಶೀಲ್ದಾರ, ಲೋಕೋಪಯೋಗಿ ಇಲಾಖೆ, ನಗರಸಭೆ, ಅರಣ್ಯ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮತ್ತು ಇವೆಂಟ್ ಮ್ಯಾನೇಜ್ ಮೆಂಟ್ ಅವರ ಸಹಕಾರ ಅಪಾರವಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತಿ ಟಿಕೆಟ್ಗೆ ರೂ 3,900 ನಿಗಧಿಪಡಿಸಲಾಗಿದೆ. ಇಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಅವರು ಅಧ್ಯಕ್ಷತೆಯಲ್ಲಿ ವಿಶೇಷವಾಗಿ ಆಶಾ ನಿಕೇತನ ವಿಶೇಷಢ ಶಾಲೆಯ ವಿದ್ಯಾರ್ಥಿಗಳಿಗೆ ಹೆಲಿಕ್ಯಾಪ್ಟರ್ ರೈಡ್ ಮಾಡುವ ಮೂಲಕ ಚಾಲನೆ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ಹೇಲಿಕ್ಯಾಪ್ಟರ್ ರೈಡ್ ಬೆಳ್ಳಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾರಡಲಿದ್ದು, ಹೇಲಿಕ್ಯಾಪ್ಟರ್ ಕಾರವಾರ ಪ್ರದೇಶವನ್ನು 7 ನಿಮಿಷದಲ್ಲಿ ಸುತ್ತು ಹಾಕಲಾಗುವುದು ಎಂದರು.
ಹೆಲಿಕ್ಯಾಪ್ಟರ್ನ ಮೊದಲ ಜಾಲಿ ರೈಡ್ ಆಗಿ, ಆಶಾನಿಕೇತನ ವಿಶೇಷಢ ಶಾಲೆಯ ವಿದ್ಯಾರ್ಥಿಗಳ ಹಾರಾಟ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಶ್ ಶಶಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳ ಗೌರಿ ಭಟ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಮತ್ತಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 