ಜಿಲ್ಲಾಡಳಿತ ಭವನದಲ್ಲಿ ಸವಿತಾ ಮಹರ್ಷಿ ಜಯಂತಿ

Savita Maharshi Jayanti at District Administration House

ಜಿಲ್ಲಾಡಳಿತ ಭವನದಲ್ಲಿ ಸವಿತಾ ಮಹರ್ಷಿ ಜಯಂತಿ 

ಗದಗ 4 : ಗದಗ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಆಚರಿಸಲಾಯಿತು. 

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ತಾಲೂಕ ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ಖಜಾನೆ ಇಲಾಖೆ ಉಪನಿರ್ದೇಶಕ ಹರಿನಾಥ ಬಾಬು, ವಾರ್ತಾಧಿಕಾರಿ ವಸಂತ ಮಡ್ಲೂರ  ಸೇರಿದಂತೆ ಸವಿತಾ ಮಹರ್ಷಿ ಸಮಾಜದ ಗಣ್ಯರು ಹಾಜರಿದ್ದು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ​‍್ಿಸಿದರು.