ಜಯಶ್ರೀ ಕಡಕೋಳಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ

ಬೆಳಗಾವಿ 16: ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ದಿ.15ರಂದು ಬಸವ ಭೀಮ ಸೇನೆಯ ವತಿಯಿಂದ ಆಯೋಜಿಸಿದ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕಣಬಗರ್ಿ ಮರಾಠಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಜಯಶ್ರೀ ಕಡಕೋಳ ಅವರಿಗೆ "ಸಾಕ್ಷರ ತಾಯಿ ಸಾವಿತ್ರಿಬಾಯಿ ಫುಲೆ" ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು. ಸಂಘಟನೆಯ ಅಧ್ಯಕ್ಷ ಆರ್.ಎಸ್.ದಗರ್ೆ, ರೈತ ನಾಯಕ ಸಿದಗೌಡ ಮೋದಗಿ, ಬಾಳಾಸಾಹೇಬ ಉದಗಟ್ಟಿ, ವಿಜಯ ತಳವಾರ, ಶಕುಂತಲಾ ಹೂಗಾರ ಮುಂತಾದವರು ಉಪಸ್ಥಿತರಿದ್ದರು.