ಪರಿಶಿಷ್ಟ ಜಾತಿ ಪಂಗಡ ಜನರ ಕಲ್ಯಾಣ ಯೋಜನೆ ಹತ್ತರಗಿ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನಕ್ಕೆ ಚಾಲನೆ

ಪರಿಶಿಷ್ಟ ಜಾತಿ ಪಂಗಡ ಜನರ ಕಲ್ಯಾಣ ಯೋಜನೆ ಹತ್ತರಗಿ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನಕ್ಕೆ ಚಾಲನೆ  Scheduled Caste People's Welfare Scheme runs for exhibition at Hatharagi Bus Stand


ಬೆಳಗಾವಿ 12: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹತ್ತರಗಿಯ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯ ಸರಕಾರ ರೂಪಿಸಿರುವ ವಿವಿಧ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಗೆ ಸೋಮವಾರ (ಜ.12) ಯಮಕನಮರಡಿ ಗ್ರಾಮ ಪಂಚಾಯತಿ ಅಧ್ಯಕ್ಷತೆ ಆಸ್ಮಾ ಫಣಿಬಂಧ ಚಾಲನೆ ನೀಡಿದರು. 

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. 

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಅವರು, ವಸ್ತುಪ್ರದರ್ಶನ ಕುರಿತು ಮಾಹಿತಿ ನೀಡಿದರು. ಸಾರಿಗೆ ಸಂಸ್ಥೆಯ ಚಿಕ್ಕೋಡಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್ ಮುಂಜಿ, ಯಮಕನಮರಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್‌.ಎಸ್‌. ಕರಿಹೊನ್ನ ಮತ್ತಿತರರು ಉಪಸ್ಥಿತರಿದ್ದರು. 

ವಸ್ತುಪ್ರದರ್ಶನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳು ಶಿಕ್ಷಣ, ಉದ್ಯೋಗ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಮತ್ತು ವಿಶೇಷ ಯೋಜನೆಗಳು; ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರದರ್ಶಿಸಲಾಗುತ್ತಿದೆ. ಜನವರಿ 12 ರಿಂದ 14 ರವರೆಗೆ ಹತ್ತರಗಿ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನ ನಡೆಯಲಿದೆ.