ಮಿಲ್ಲತ್ ಶಾಲೆಯಲ್ಲಿಂದು ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮ
ಕೊಪ್ಪಳ 21 :ನಗರದ ನಿರ್ಮಿತಿ ಕೇಂದ್ರ ಬಡಾವಣೆ ಬಹದ್ದೂರ್ ಬಂಡಿ ರಸ್ತೆ ಯಲ್ಲಿರುವ ಮಿಲ್ಲತ್ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 22ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮ ಜರುಗಲಿದೆ, ಸಂತೆ ಮೇಳದ ಉದ್ಘಾಟನೆಯನ್ನು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ ಪಟೇಲ್ ನೆರವೇರಿಸಲಿದ್ದುವಸ್ತು ಪ್ರದರ್ಶನದ ಉದ್ಘಾಟನೆಯನ್ನು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ನೆರವೇರಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಕೊಪ್ಪಳ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದುಗಿನಮಠ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಕ್ಬರ್ ಪಾಷಾ ಪಲ್ಟನ್, ನಗರಸಭೆಯ ಸದಸ್ಯರಾದ ಗುರುರಾಜ್ ಹಲಗೇರಿ ಅಂಜುಮನ್ ಕಮಿಟಿ ಅಧ್ಯಕ್ಷರಾದ ಎಂಡಿ ಆಸಿಫ್ ಕರ್ಕಿಹಳ್ಳಿ, ಕರ್ನಾಟಕ ಮುಸ್ಲಿಂ ಯುನಿಟಿ ಜಿಲ್ಲಾ ಅಧ್ಯಕ್ಷರಾದ ಎಂಡಿ ಜಿಲಾನ್ ಕಿಲ್ಲೆದಾರ್, ಲ್ಯಾಂಡ್ ಡೆವಲೂಪರ್ ಎಂ ನಾಸೀರ್ ಹುಸೇನ್, ಕಾಂಗ್ರೆಸ್ ಅಲ್ಪಸಂಖ್ಯಾತರ ನಾಯಕ ರ್‌ಎಂ ರಫಿ ಪಾಲ್ಗೊಳ್ಳಲಿದ್ದಾರೆ, ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮುಖ್ಯ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ, ಶಾಲೆಯ ಆಡಳಿತ ಮಂಡಳಿ ಕಾರ್ಯ ನಿರ್ವಾಹಕ ಸಂಚಾಲಕರಾದ ಅಬ್ದುಲ್ ಅಜೀಜ ಮಾನ್ವಿಕರ್ ಮತ್ತು ಸೈಯದ್ ಇಮಾಮ ಹುಸೇನ್ ಸಿಂದೂಗಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ಪ್ರಕಟನೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,