ಮಹಿಳೆಯರಿಗೆ ಸಮಾನ ಅವಕಾಶ ದೊರೆತರೆ ದೇಶದಲ್ಲಿ ವೈಜ್ಞಾನಿಕ ಪ್ರಗತಿ ಸಾಧ್ಯ: ವಿನಯ್ ಕುಮಾರ್
Scientific progress in the country is possible if women are given equal opportunities: Vinay Kumar
ಬೆಳಗಾವಿ 28: ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಆದರೆ ವಿಜ್ಞಾನ, ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇವರ ಪ್ರಾತಿನಿದ್ಯ ತೀರಾ ಕಡಿಮೆಯಾಗಿದೆ. ಮಿಸೈಲ್ ವುಮೆನ್ ಆಪ್ ಇಂಡಿಯಾ ಎಂದು ಕರೆಯಲ್ಪಡುವ ಡಾ. ಟೆಸ್ಸಿ ಥಾಮಸ್, ಲಸಿಕೆಗಳ ಆವಿಷ್ಕಾರಕರಾದ ನವದಾ ಗುಪ್ತಾರ ಹಾಗೂ ಬಯೋಟೆಕ್ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಮುಂಚೂಣಿಯಲ್ಲಿ ತಂದ ಡಾ ಕಿರಣ್ ಮಜುಂದರ್ ಶಾ ಸೇರಿದಂತೆ ಅನೇಕ ಮಹಿಳೆಯರು ವಿಜ್ಞಾನ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿದ್ದಾರೆ. ಇವರಂತೆ ಇನ್ನುಳಿದ ಮಹಿಳಾ ಸಾಧಕರಿಗೆ ಸಮಾನ ಅವಕಾಶ ದೊರೆತರೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಮಹಿಳೆಯರು ದೊಡ್ಡ ಕೊಡುಗೆ ನೀಡಬಹುದು ಎಂದು ಆರ್. ಎಲ್. ವಿಜ್ಞಾನ ಮಹಾವಿದ್ಯಾಲಯದ ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ವಿನಯ ಕುಮಾರ್ ಎಂ. ಅಭಿಪ್ರಾಯಪಟ್ಟರು.
ಅವರು ಇಂದು ಇಲ್ಲಿನ ಶಿವಬಸವ ನಗರದ ಡಾ. ಸ. ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಕೇಂದ್ರ ವಿಷಯವಾದ "ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು : ವಿಕಸಿತ ಭಾರತಕ್ಕೆ ಉತ್ತೇಜನ" ಎಂಬ ವಿಷಯದ ಕುರಿತು ಮಾತನಾಡಿದ ಅವರು ಮಹಿಳೆಯರಿಗೆ ತಮ್ಮ ವೃತ್ತಿ ಬದುಕಿನಲ್ಲಿ ಹಾಗೂ ವೈಯಕ್ತಿಕ ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಲು ಕುಟುಂಬದ ಬೆಂಬಲ ಅತಿ ಮುಖ್ಯವಾಗಿರಬೇಕು. ಉನ್ನತ ವಿದ್ಯಾಭ್ಯಾಸ ಹಾಗೂ ಸಂಶೋಧನೆಗೆ ಪ್ರೋತ್ಸಾಹ ದೊರೆತರೆ ಭಾರತದ ವೈಜ್ಞಾನಿಕ ಕ್ಷೇತ್ರದಲ್ಲಿ ಅವರ ಸಾಧನೆ ಹಿರಿದಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ.ಎಲ್. ಪಾಟೀಲ ಮಾತನಾಡಿ ಜಗತ್ತಿನ ಎಲ್ಲ ಜ್ಞಾನಗಳಿಗಿಂತ ಶ್ರೇಷ್ಠವಾದ ಜ್ಞಾನ ವಿಜ್ಞಾನ. ವಿಜ್ಞಾನವಿಲ್ಲದ ಬದುಕು ಊಹಿಸಲು ಸಾಧ್ಯವಿಲ್ಲ. ನಮ್ಮ ಬದುಕಿನ ಪ್ರತಿ ಹಂತದಲ್ಲೂ ವಿಜ್ಞಾನ ಹಾಸು ಹೊಕ್ಕಾಗಿದೆ. ಇದನ್ನು ಅರಿತು ಮಹಿಳೆಯರು ಕಠಿಣ ಪರಿಶ್ರಮ, ದೂರ ದೃಷ್ಟಿ ಹಾಗೂ ವೈಜ್ಞಾನಿಕ ಮನೋಭಾವ ಅಳವಡಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಅಡುಗೆ ಮನೆಯಿಂದಲೇ ವಿಜ್ಞಾನ ಆರಂಭಗೊಂಡರೆ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದರು. ವೇದಿಕೆ ಮೇಲೆ ಬೆಳಗಾವಿ ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಶನ್ ಕಾರ್ಯದರ್ಶಿ, ಮನೋಹರ ಉಳ್ಳೇಗಡ್ಡಿ, ಪ್ರಾಧ್ಯಾಪಕ ಶ್ರೀಧರ ಕಿಳ್ಳಿಕೇತರ ಸೇರಿದಂತೆ ಇತರ ಬೋಧನಾ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳಾದ ರಾಜೇಶ್ವರಿ ಸಕ್ರ್ಪನವರ ನಿರೂಪಿಸಿದರು. ಗಾಯತ್ರಿ ಹೂಲಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 