ಫೆ.28 ರಿಂದ ಮಾ.17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದ್ದು ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವಂತೆ: ರಿಷಿ ಆನಂದ ಸೂಚನೆ
Second PUC Exam-1 will be held from Feb. 28 to Mar. 17, Rishi Anand instructs to conduct the exams
ವಿಜಯಪುರ, ಫೆ.19 : ಜಿಲ್ಲೆಯ 13 ತಾಲೂಕುಗಳಲ್ಲಿ ಒಟ್ಟು 64 ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ಹಾಗೂ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ರಿಷಿ ಆನಂದ ಅವರು ಸೂಚಿಸಿದರು. ಅವರು, ನಗರದ ಗಾಂಧಿ ವೃತ್ತದ ಬಳಿ ಇರುವ ಸರ್ಕಾರಿ ಪಿಯುಸಿ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಜಿಲ್ಲೆಯ 13 ತಾಲೂಕುಗಳಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, 32178 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿರುವರು. ಯಾವುದೇ ಸಮಸ್ಯೆಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಪರಿಕ್ಷಾ ಕೇಂದ್ರ ಮುಖ್ಯಸ್ಥರು ಪರೀಕ್ಷೆ ನಡೆಯುವ ಮುಂಚೆ ಪರೀಕ್ಷಗೆ ನಿಯೋಜಿತಗೋಂಡ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕೋಠಡಿಗಳ ಸುವ್ಯವಸ್ಥೆತವಾಗಿರುವಂತೆ ನೊಡಿಕೊಳಬೇಕು ಪರೀಕ್ಷಾ ದಿನಗಳಂದ್ದು ಶುದ್ದ ಕುಡಿಯುವ ನೀರು, ಶೌಚಾಲಯ, ಸರ್ಮಪಕವಾಗಿ ಬೆಳಕು ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗೃತೆ ಕ್ರಮ ವಹಿಸಬೇಕು. ಇರುವಂತೆ ನೊಡಿಕೊಳಬೇಕು ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳನ್ನು 27 ಮಾರ್ಗಾಧಿಕಾರಿಗಳ ತಂಡಕ್ಕೆ ಹಸ್ತಾಂತರಿಸಲು ಅಪರ ಜಿಲ್ಲಾಧಿಕಾರಿಗಳು, ಉಪ ನಿರ್ದೇಶಕರು ಜಿಲ್ಲಾ ಖಜಾನೆ ಮತ್ತು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಇವರನ್ನೊಳಗೊಂಡ ಸಮಿತಿ ನೇಮಕ ಮಾಡಲಾಗಿದೆ.
ಒಟ್ಟು 27 ಪರೀಕ್ಷಾ ಕೇಂದ್ರದ ಮಾರ್ಗಗಳಿದ್ದು ಇದಕ್ಕಾಗಿ ತಹಶೀಲ್ದಾರರು, ತಹಶೀಲ್ದಾರರು ಗೇಡ್-2,ಉಪ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಸರಕಾರಿ/ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರುಗಳನ್ನು ತ್ರಿಸದಸ್ಯ ಸಮಿತಿಯ ಸದಸ್ಯರನ್ನಾಗಿ ಮಾನ್ಯ ಜಿಲ್ಲಾಧಿಕಾರಿಗಳು ನೇಮಕ ಮಾಡಲಾಗಿದೆ. ತ್ರಿಸದಸ್ಯ ಸಮಿತಿ ತಂಡಕ್ಕೆ ತಲಾ ಒಬ್ಬ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತಿಗಾಗಿ ಅವಶ್ಯಕತೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಪರೀಕ್ಷಾ ಕೇಂದ್ರದಿಂದ ಅಂಚೆ ಕಛೇರಿಗೆ ಸಾಗಿಸುವಾಗ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಪೊಲೀಸ್ ವರಿಷ್ಠಾಧಿಕಾರಿಗಳು, ಇವರಿಗೆ ಸೂಚಿಸಲಾಗಿದೆ.
ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ ಕಲ್ಪಿಸಿವ ಕ್ರಮಕ್ಕೆ ಸೂಚಿಸಲಾಯಿತು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ ಕ್ಯಾಮರಾ ಅಳವಡಿಸಲು ಕ್ರಮ ವಹಿಸಬೇಕು ಹಾಗೂ ಸಮರ್ಕವಾಗಿ ಕರ್ತವ್ಯ ನಿರ್ವಹಿಸತ್ತಿರುವಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗ ಕಚೇರಿಗಳಲ್ಲಿ ಸುಸುತ್ರವಾಗಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಿ ನಿಘಾ ವಹಿಸಲು ಕ್ರಮ ವಹಿಲಾಗುವುದು ಪರೀಕ್ಷೆಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಚ್ಚುಕಟ್ಟಾಗಿ ಯಾವುದೇ ರೀತಿ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಪೊಲೀಸ್ ಇಲಾಖೆ ನಿಮ್ಮೊಂದಿಗೆ ಸಹಕರಿಸುವುದಾಗಿ ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಕಾನೂನು ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಯಾವುದೇ ಸಮಸ್ಯಗಳ ಬಾರದಂತೆ ನಿಮಗೆ ಎಲ್ಲ ರೀತಿ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಓದ್ರಾಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಹೊಸಮನಿ, ಎ.ಕೆ ಉಪ್ಪರ ಸಿ.ಬಿ. ನಾಟಿಕಾರ ಬಿ.ಬಿ. ಗಂಗನಹಳ್ಳಿ ಪ್ರಕಾಶ ಮೇತ್ರಿ ಎಲ್ಲ ತಾಲೂಕಿನ ತಹಶೀಲ್ಧಾರರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಮಾರ್ಗಾಧಿಕಾರಿಗಳು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 