ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಮುಷ್ಕರ

Second phase of strike by village administrative officers in Bellary district

ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಮುಷ್ಕರ  

ಬಳ್ಳಾರಿ 10: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲೆಯ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಮುಷ್ಕರವನ್ನು  ಹಮ್ಮಿಕೊಳ್ಳಲಾಯಿತು. ಇದೇ ವೇಳೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾಧ್ಯಕ್ಷರಾದ ಶಶಿಧರ ಬಿ ಮಾತನಾಡಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳಾದ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆಗಳನ್ನು ಈಡೇರಿಸದ ಕಾರಣ ರಾಜ್ಯ ವ್ಯಾಪಿ, ಈ  ಎರಡನೇ ಹಂತದ ಮುಷ್ಕರಕ್ಕೆ ನಾವೆಲ್ಲರೂ ಒಗ್ಗಟ್ಟಾಗಿ ಪ್ರತಿಭಟನೆ ಮಾಡುತ್ತೇವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾಭವನ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ವಿವಿಧ  ಪದಾಧಿಕಾರಿಗಳು,ತಾಲೂಕು ಅಧ್ಯಕ್ಷರು,ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ಮೊದಲನೇ ಮುಷ್ಕರದಲ್ಲಿ ಎಂಟು ದಿನಗಳವರೆಗೆ ರಾಜ್ಯಾದ್ಯಂತ ನಮಸ್ಕಾರ  ನಡೆಸಿದ ನಂತರ  03 ಅಕ್ಟೋಬರ್ 2024ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ.  

ಅದರಂತೆ ಸದರಿ ದಿನದಿಂದಲೇ ಮುಷ್ಕರವನ್ನು ಹಿಂಪಡೆಯಲಾಗಿದೆ, ತದನಂತರ ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ, ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲು ಈಗ ನಮ್ಮಗೆ  ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿದೆ. ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಈ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳು ಹೇಳಿದ್ದಕ್ಕಾಗಿ ರಾಜ್ಯ ವ್ಯಾಪಿ ಆ ನಿರ್ದಿಷ್ಟ ಅವಧಿಗೆ ಎಲ್ಲಾ ಕೆಲಸಗಳನ್ನು ಸ್ಥಿತಿಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ.  

ಇದು ರಾಜ್ಯ ಮಟ್ಟದ ಮುಷ್ಕರವಾಗಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಜಿಲ್ಲೆಗಳಲ್ಲಿ ಹಾಗೂ ತಾಲೂಕುಗಳಲ್ಲಿ   ಹಮ್ಮಿಕೊಂಡು ಮುಷ್ಕರವನ್ನು ಮಾಡುತ್ತಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಸಜ್ಜಿತವಾದ ಕಚೇರಿ, ಹಾಗೂ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ಸಿಯುಜಿ ಸಿಮ್ ಮತ್ತು ಡೇಟಾ ಗೂಗಲ್, ಕ್ರೋಮ್ ಬುಕ್ ಲ್ಯಾಪ್ಟಾಪ್, ಪ್ರಿಂಟರ್, ಮತ್ತು ಸ್ಕ್ಯಾನರ್ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.  

ಅಂತರ್ ಜಿಲ್ಲಾ ವರ್ಗಾವಣೆಯ  ಕೆಸಿಎಸ್‌ಆರ್ ನಿಯಮ 16 ಎ ರ ಉಪಖಂಡ (2)ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿಯನ್ನು ರಚಿಸುವುದು ಪ್ರಮುಖವಾಗಿದೆ. ನಾವು ಎಲ್ಲಾರು ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸ ಮಾಡಲ್ಲ ಅಂತ ಅಲ್ಲಾ, ಕೆಲಸ ಮಾಡುತ್ತೇವೆ ಆದರೆ ಕಚೇರಿಯ ಮೂಲಭೂತ ಸೌಲಭ್ಯಗಳು ಸರ್ಕಾರ  ಒದಗಿಸಬೇಕು ಇಲ್ಲವಾದಲ್ಲಿ ಮುಂದಿನ ಈ ದಿನಗಳಲ್ಲಿ ಸಹ ನಮ್ಮ ಬೇಡಿಕೆಗಳು ಈಡೇರಿರುವವರೆಗೂ ಎರಡನೇ ಹಂತದ ಈ  ಮುಷ್ಕರವನ್ನು ಮಾಡುತ್ತಿದ್ದೇವೆ  ಎಂದು  ಸುದ್ದಿಗಾರರೊಂದಿಗೆ ಮಾತನಾಡಿದರು. ತಿಪ್ಪಯ್ಯ, ಸುರೇಶ್, ಕಾರ್ತಿಕ್, ನಂದೀಶ, ಉದಯ್, ಪದ್ಮಾವತಿ,ಲಕ್ಷ್ಮಿ ದೇವಿ,ಸರಸ್ವತಿ, ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.