ವಿತರಕರಿಂದ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ವಶ
Seizure of banned single-use plastic items from distributors
ಕಾರವಾರ, ಫೆ.2:- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಹಾಗೂ ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ ಇವರು ಭಾನುವಾರ ಯಲ್ಲಾಪುರ ತಾಲ್ಲೂಕಿಗೆ ಪರೀವೀಕ್ಷಣೆಗೆ ಹೊರಟ ಸಂದರ್ಭದಲ್ಲಿ ಅನೀರೀಕ್ಷಿತವಾಗಿ ಅವರ್ಸಾದಲ್ಲಿ ಜಗದೀಶ ಖಾಜಾ ಸಿಂಗ್ ಮತ್ತು ಧೀರಜ್ ಎಂಬ ವಿತರಕರು ಪ್ಲಾಸ್ಟಿಕ್ ಸ್ಟ್ರಾ, ಕಪ್ ಮತ್ತು ಕ್ಯಾರಿಬ್ಯಾಗ್ ಇತ್ಯಾದಿಗಳನ್ನೊಳಗೊಂಡ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದನ್ನು ಗಮನಿಸಿ, ಅವರನ್ನು ತಡೆದು ವಿಚಾರಿಸಲಾಗಿದ್ದು, ಭೀಮಾರಾಮ್ ಎಂಬುವವರು ಕೊಟ್ಟು ಕಳಿಸಿರುವುದಾಗಿ ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಸುಮಾರು 10 ರಿಂದ 15 ಕೆಜಿಗಳಷ್ಟು ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಅವರಿಗೆ ಇನ್ನು ಮುಂದೆ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಿತರಿಸದಂತೆ ತಾಕೀತು ಮಾಡಲಾಯಿತು ಹಾಗೂ ಭೀಮಾರಾಮ್ ಅವರ ವಿವರವನ್ನು ಪಡೆದು ವಿಚಾರಣೆ ನಡೆಸಿ ಮುಂದಿನ ಕ್ರಮ ವಹಿಸಲು ನಗರಸಭೆ, ಕಾರವಾರ ಇವರಿಗೆ ತಿಳಿಸಲಾಗಿದೆ.
ಈ ಕುರಿತು ಸಾರ್ವಜನಿಕರು ಸಹ ಜಾಗೃತಿ ಹೊಂದಬೇಕು. ಇತ್ತೀಚಿನ ದಿನಗಳಲ್ಲಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳಾದ ಪ್ಲಾಸ್ಟಿಕ್ ಲೋಟ, ಚಮಚ, ಕ್ಯಾರಿಬ್ಯಾಗ್‌ಗಳು ಇತ್ಯಾದಿಗಳನ್ನು ಬಳಸಿ ಎಲ್ಲೆಂದರಲ್ಲಿ, ರಸ್ತೆಯ ಇಕ್ಕೆಲಗಳಲ್ಲಿ ಎಸೆಯಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತಗೊಂಡು ನಿಷೇಧಿತ ಏಕ ಬಳಕೆಯ ವಸ್ತುಗಳನ್ನು ಬಳಸದೇ ಅವುಗಳ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಾದ ಅಡಿಕೆ ಎಲೆ / ಕಟ್ಟಿಗೆ / ಗಾಜು / ಪೇಪರ್ / ಸ್ಟೀಲ್‌ನಿಂದ ತಯಾರಿಸಿದ (ಪೇಪರ್ ಲೋಟ, ತಟ್ಟೆ, ವುಡನ್ ಚಮಚ, ಅಡಿಕೆ ಹಾಳೆ ತಟ್ಟೆ, ದೊನ್ನೆ, ಬಗ್ಗಾಸ್ ದೊನ್ನೆ, ಲೋಟ, ಗಾಜಿನ ಲೋಟ, ಮಣ್ಣಿನ ಲೋಟ, ಸ್ಟೀಲ್ ತಟ್ಟೆ, ಲೋಟ, ಸ್ಪೂನ್, ಬಟ್ಟೆ ಚೀಲಗಳು ಇತ್ಯಾದಿ ಪರಿಸರ ಸ್ನೇಹಿ ವಸ್ತುಗಳು) ವಸ್ತುಗಳನ್ನು ಬಳಸಿ ಪರಿಸರ ನೈರ್ಮಲ್ಯವನ್ನು ಕಾಪಾಡಲು ಸಹಕರಿಸಬೇಕೆಂದು ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 