ಖೋ-ಖೋ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ
ಹಾವೇರಿ 29: ಇಲ್ಲಿನ ಇಜಾರಿ ಲಕಮಾಪುರದಲ್ಲಿನ ಟಿಎಂಎಇಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಪ್ರಶಿಕ್ಷಣಾರ್ಥಿ ಮುದರಸ್ ಅಹಮದ ಮುಲ್ಲಾ ಹಾವೇರಿ ವಿಶ್ವವಿದ್ಯಾಲಯ ಆಯೋಜಿಸಿದ ಖೋ-ಖೋ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ ಆಗಿದ್ದು, ಪ್ರಶಿಕ್ಷಣಾರ್ಥಿಗೆ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರು, ಕಾರ್ಯದರ್ಶಿಗಳು, ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.