ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

Selected as University Blue

ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ 

ದೇವರಹಿಪ್ಪರಗಿ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ವಿಕಾಸ ಪಾಟೀಲ ಹಾಗೂ ಕಾರ್ತಿಕ ರಾಠೋಡ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ಅಶೋಕ ಹೆಗಡೆ ಹೇಳಿದರು.ಪಟ್ಟಣದ ಕಾಲೇಜಿನ ಆವರಣದಲ್ಲಿ ಮಾತನಾಡಿದ ಅವರು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ಕಾಲೇಜಿನ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ವಿಕಾಸ ಪಾಟೀಲ ಹಾಗೂ ಕಾರ್ತಿಕ ರಾಠೋಡ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ಫೆಬ್ರುವರಿಯಲ್ಲಿ ಚೆನ್ನೈನಲ್ಲಿ ನಡೆಯುವ ಸೌತ್ ಜೋನ್ ಟೂರ್ನಮೆಂಟ್ ನಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಕ್ರೀಡೆಯಲ್ಲಿ ಗ್ರಾಮೀಣ ಪ್ರತಿಭೆಗಳು ಅರಳುತ್ತಿರುವದು ಸಂತಸ ಉಂಟು ಮಾಡಿದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ದೈಹಿಕ ನಿರ್ದೇಶಕರಾದ ಪ್ರೊ.ಎಂ.ಎಂ.ಲಕ್ಷ್ಮಿಶ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ