ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ
Selected for the district level after securing first place in throwball
ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ
ಹಾವೇರಿ:ಪ್ರಸಕ್ತ2025-26 ನೇ ಸಾಲಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಆಕ್ಸಪರ್ಡ ಪದವಿ ಪೂರ್ವ ಕಾಲೇಜು, ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಬಸವೇಶ್ವರ ನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕರ ಗುಂಪು ಸ್ಪರ್ಧೆಯಲ್ಲಿ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಖೋ-ಖೋ ನಲ್ಲಿ ದ್ವಿತೀಯ ಸ್ಥಾನ, ಚೆಸ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ವೈಯಕ್ತಿಕ ಸ್ಪರ್ಧೆಯಲ್ಲಿ 200 ಮೀ ಓಟದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ, ವೇಗದ ನಡೆಗೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆಗೈದ ಎಲ್ಲ ಕ್ರೀಡಾಪಟುಗಳಿಗೆ ಕಾಲೇಜಿನ ಪ್ರಾಚಾರ್ಯರು ಅಭಿನಂದನೆ ಸಲ್ಲಿಸಿ, ವೈಯಕ್ತಿಕ ನಗದು ಬಹುಮಾನ ಘೋಷಿಸಿದರು.ಸಾಧಕ ಕ್ರೀಡಾಪಟುಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಎಲ್ಲ ಸರ್ವ ಸದಸ್ಯರು ಮತ್ತು ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 