ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
Selected for the state level in the athletics competition
ಹಾರೂಗೇರಿ 18: ಅಧ್ಯಯನವೊಂದೇ ವಿದ್ಯಾರ್ಥಿಗಳ ಧ್ಯೇಯವಾಗಬಾರದು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಬಿ.ಕರ್ಣವಾಡಿ ಹೇಳಿದರು.
ಪಟ್ಟಣದ ಜನತಾ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿದ ಅವರು ಕಲಿಕೆಯೊಂದಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳು ಸರ್ವಾಂಗೀಣ ವಿಕಾಸ ಹೊಂದುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವಿದೆ ಎಂದರು.
ಇತ್ತೀಚೆಗೆ ನಡೆದ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಗವಾನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಸನ್‌ಕುಮಾರ ಬಂಡಗಾರ ಗುಂಡು ಮತ್ತು ಬಲ್ಲೆ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಮನೋಜ ಕೊಕಟನೂರ ಗುಂಡು ಎಸೆತದಲ್ಲಿ ದ್ವಿತೀಯಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 