ಜಾಗತಿಕ ಸ್ಪರ್ಧೆಯಲ್ಲಿ ಆತ್ಮವಿಶ್ವಾಸ ಅಗತ್ಯ
Self-confidence is essential in global competition
ಲೋಕದರ್ಶನ ವರದಿ
ಹೂವಿನಹಡಗಲಿ 01: ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಸ್ಪರ್ಧೆಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಪ್ರಾಚಾರ್ಯ ನಾಗಲಿಂಗಸ್ವಾಮಿ ಹೇಳಿದರು.ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಬಹುತೇಕ ಬಡವರು ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿಂದ ಬಂದವರು. ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳ ಹಾಗೆ ವೈದ್ಯಕೀಯ, ಇಂಜೀನೀಯರ್ ಉನ್ನತ ಮಟ್ಟದ ಶಿಕ್ಷಣ ಪೂರೈಸುವತ್ತ ಗುರಿ ಇರಲಿ ಎಂದು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ್ದ ಕೊಟ್ರಗೌಡ ಅಯ್ಯನಗೌಡ್ರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಭವಿಷ್ಯ ರೂಪಿಸುವಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಎ. ಶಿವಕುಮಾರ್, ನಟರಾಜ್ ಪಾಟೀಲ್, ಶ್ರೀಕಾಂತ್ ಬಂಡಿಹಾಳ್ , ಮಂಜುನಾಥ್ ಡಿ. ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 