ಸ್ವ-ಉದ್ಯೋಗಕ್ಕೆ ಸೃಜನಾತ್ಮಕ ಕೌಶಲ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

Self-employment requires creative skills: GPAM CEO Rahul Sharanappa Sankanur

ಸ್ವ-ಉದ್ಯೋಗಕ್ಕೆ ಸೃಜನಾತ್ಮಕ ಕೌಶಲ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ 

ಬಳ್ಳಾರಿ 15: ಸ್ವ-ಉದ್ಯೋಗ ಕೈಗೊಳ್ಳಲು ಸೃಜನಾತ್ಮಕವಾಗಿ ಹೊಸ ವಿಧದ ಕೌಶಲ್ಯ ತರಬೇತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಬ್ಯೂಟಿ ಪಾರ್ಲರ್ ತರಬೇತಿ ಕಾರ್ಯಕ್ರಮ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತದಲ್ಲಿ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡುವರಿಂದ, ಬ್ಯೂಟಿ ಪಾರ್ಲರ್‌ನಲ್ಲಿ ವಿಧದ ಮೇಕಪ್ ಕೌಶಲ್ಯವನ್ನು ಬೆಳಸಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಇಂತಹ ತರಬೇತಿಗಳು ಸಹಕಾರಿಯಾಗಲಿ ಎಂದು ಅವರು ಹಾರೈಸಿದರು. ಮಹಿಳೆಯರು ಈಗಿನ ಕಾಲದಲ್ಲಿ ಸೌಂದರ್ಯದ ಬಗ್ಗೆ ತುಂಬಾ ಕಾಳಜಿ ವಹಿಸುವುದರಿಂದ ಬ್ಯೂಟಿ ಪಾರ್ಲರ್ ಮತ್ತು ಬ್ಯೂಟಿಷಿಯನ್ ಗಳಿಗೆ ತುಂಬಾ ಬೇಡಿಕೆಯಿದೆ. ಬೇಡಿಕೆಗೆ ಅನುಗುಣವಾಗಿ ಕಾಲಕ್ಕೆ ತಕ್ಕಂತೆ ಹೊಸ ವಿನ್ಯಾಸಕ್ಕೆ ನೈಪುಣತೆ ಹೊಂದಿ ಸ್ವ-ಉದ್ಯಮ ಪ್ರಾರಂಭ ಮಾಡಿದರೆ ಮಹಿಳೆಯರು ಸ್ವಾವಲಂಬಿಗಳಾಗಿ ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದು ಹೇಳಿದರು. ಮಹಿಳೆಯರು ಮನೆಯಲ್ಲಿ ಕುಳಿತು ಬ್ಯೂಟಿ ಪಾರ್ಲರ್ ಮಾಡುವದರಿಂದ ಕೌಟುಂಬಿಕ ಜೀವನದಲ್ಲಿ ಆರ್ಥಿಕವಾಗಿ ಸಬಲರಾಗಬಹುದು. ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ 34 ಜನ ಶಿಬಿರಾರ್ಥಿಗಳಿಗೆ ಬ್ಯೂಟಿಪಾರ್ಲರ್ ಟೂಲ್ ಕಿಟ್ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂನ ಯೋಜನಾ ನಿರ್ದೇಶಕ ವಿನೋದ್, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ಜಿಪಂ ಎನ್‌ಆರ್‌ಎಲ್‌ಎಂ ನ ರಾಜೇಂದ್ರ, ರಘುವರ್ಮಾ, ಉಪನ್ಯಾಸಕರಾದ ಜಡೇಪ್ಪ, ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್, ಕಿರಣ ಕುಮಾರ ಸೇರಿದಂತೆ ಇತರರು ಭಾಗವಹಿಸಿದ್ದರು.