ಸ್ವಚ್ಛ ಭಾರತ ಅಭಿಯಾನಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಚಾಲನ
ರಾಯಬಾಗ 31 : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪಟ್ಟಣ ಪಂಚಾಯತ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಚಾಲನೆ ನೀಡಿದರು.ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ, ಎಪಿಪಿ ಹನುಮಂತ ಅಚಮಟ್ಟಿ, ಎಮ್.ಎಮ್.ಪಾಟೀಲ ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.