ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಿರಿಯ ನಾಗರಿಕರು
Senior citizens participated in the sports event with enthusiasm
ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಿರಿಯ ನಾಗರಿಕರು
ಹಾವೇರಿ 16: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಹಿರಿಯ ನಾಗರಿಕರ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್ ಬಿ ಅಣ್ಣಿಗೇರಿ ಉದ್ಘಾಟಿಸಿದರು.
ಹಾವೇರಿ ನಗರದ ಚನಬಸಪ್ಪ ಮಾಗಾವಿ(ಗೆಳೆಯರ ಬಳಗ) ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರಥಮ, ದ್ವಿತೀಯ, ತೃತಿಯ ಸ್ಥಾನ ಪಡೆದವರಿಗೆ ಬರುವ ಅಕ್ಟೋಬರ್ 09 ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದ 200ಕ್ಕೂ ಅಧಿಕ ಹಿರಿಯ ನಾಗರಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಅಧಿಕಾರಿಗಳು ಎಲ್ಲಾ ತಾಲೂಕಿನ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 