ಫೆ.2ರ ಉದ್ಯೋಗ ಮೇಳದ ಪೂರ್ವ ಸಿದ್ಧತೆ ಪರೀಶೀಲಿಸಿದ ಉನ್ನತಾಧಿಕಾರಿಗಳು
Senior officials review preparations for Feb. 2 job fair
ವಿಜಯಪುರ, ಫೆ.01: ನಗರದ ದರ್ಬಾರ್ ಶಾಲಾ ಆವರಣದಲ್ಲಿ ಫೆಬ್ರವರಿ 2ರಂದು ನಡೆಯಲಿರುವ ಉದ್ಯೋಗ ಮೇಳದ ಪೂರ್ವ ಸಿದ್ಧತೆಯನ್ನು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತ ನಾಯಕ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸ್ನೇಹಿಲ್ ಆರ್., ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ರಿಷಿ ಆನಂದ ಅವರು ಸ್ಥಳಕ್ಕೆ ಭೇಟಿ ನೀಡಿ ರವಿವಾರ ಪರೀಶೀಲನೆ ನಡೆಸಿದರು.
ಉದ್ಯೋಗ ಮೇಳಕ್ಕೆ ನಿರ್ಮಾಣವಾಗಿರುವ ವೇದಿಕೆ, ಅಭ್ಯರ್ಥಿಗಳ ಸಂದರ್ಶನ ನಡೆಯುವ ಕೊಠಡಿಗಳ ವ್ಯವಸ್ಥೆ ಸೇರಿದಂತೆ ವ್ಯವಸ್ಥಿತ ಉದ್ಯೋಗ ಮೇಳಕ್ಕೆ ಕಲ್ಪಿಸಲಾಗಿರುವ ಅಗತ್ಯ ಸಿದ್ಧತೆಗಳ ಕುರಿತು ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳಿಗೆ ಯಾವುದೇ ಗೊಂದಲವಾಗದಂತೆ, ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭ್ಯರ್ಥಿಗಳು ಸುಗಮವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ಸಂದರ್ಶನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಉದ್ಯೋಗ ಮೇಳ ಆಯೋಜನೆಗೆ ಸ್ಪಷ್ಟ ಮಾರ್ಗದರ್ಶನ ನೀಡಿದ ಅವರು, ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಉದ್ಯೋಗ ಮೇಳದ ಯಶಸ್ಸಿಗಾಗಿ ಎಲ್ಲ ಇಲಾಖೆಗಳ ಸಹಕಾರದಿಂದ ಸಕಲ ಸಿದ್ಧತೆಗಳನ್ನು ಸಮರ್ಕವಾಗಿ ಕೈಗೊಳ್ಳುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಸಿಡಾಕ್ ಜಂಟಿ ನಿರ್ದೇಶಕರಾದ ಸುಪ್ರಿಯಾ ಬಳ್ಳಾರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಹುಲ ಭಾವಿದೊಡ್ಡಿ, ಎನ್‌ಐಸಿ ಅಧಿಕಾರಿ ಶಿವಾನಂದ ಗೂಗವಾಡ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಗುರುಪಾದಯ್ಯ ಹಿರೇಮಠ, ಮಹೇಶ ಮಾಳವಾಡಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 