ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದವರಿಗೆ ಕಠಿಣ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ

ಕೊಪ್ಪಳ 15: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಎಸಗುವವರನ್ನು ಮತ್ತಷ್ಟೂ ಕಠಿಣವಾಗಿ ಶಿಕ್ಷಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ರವರು ಹೇಳಿದರು.  

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್- ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ,  ಸಹಯೋಗದಲ್ಲಿ ಶುಕ್ರವಾರದಂದು (ಜುಲೈ.12 ರಂದು) ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಮತ್ತು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ  ಕುರಿತು ಹಮ್ಮಿಕೊಳ್ಳಲಾದ ಒಂದು ದಿನದ ತರಬೇತಿ ಕಾಯರ್ಾಗಾರ ಉದ್ಘಾಟಿಸಿದ ಅವರು ಮಾತನಾಡಿದರು.  

ಭಾರತ ಸರಕಾರವು ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ದೌರ್ಜನ್ಯ, ಕಿರುಕುಳವನ್ನು ತಡೆಗಟ್ಟಲು ಮತ್ತು ಮಕ್ಕಳಸ್ನೇಹಿ ನ್ಯಾಯದಾನ ವ್ಯವಸ್ಥೆ, ಪರಿಸರ ನಿಮರ್ಾಣಕ್ಕಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ನ್ನು ಜಾರಿಗೊಳಿಸಿದೆ. ಈ ಕಾಯ್ದೆಯಡಿಯಲ್ಲಿ 2012ನೇ ಸಾಲಿನಿಂದ 2018ನೇ ಸಾಲಿನವರೆಗೆ ಕೊಪ್ಪಳ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಒಟ್ಟು 85 ಪ್ರಕರಣಗಳು, ಗಂಗಾವತಿ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಒಟ್ಟು 85 ಪ್ರಕರಣಗಳು, ಕುಷ್ಠಗಿ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಒಟ್ಟು 46 ಪ್ರಕರಣಗಳು, ಯಲಬುಗರ್ಾ ತಾಲೂಕಿನ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 252 ಪ್ರಕರಣಗಳು ದಾಖಲಾಗಿವೆ.  12 ಪ್ರಕರಣಗಳಲ್ಲಿ  ಆರೋಪಿಗಳಿಗೆ ಹಾಗೂ ಕೃತ್ಯಕ್ಕೆ ಸಹಕರಿಸಿದವರಿಗೂ ಶಿಕ್ಷೆಯಾಗಿದೆ.  ಇಷ್ಟೂ ತೀಕ್ಷಣವಾದ ಕಾನೂನು ಜಾರಿಯಲ್ಲಿದ್ದರೂ ಸಹ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ ಪ್ರಕರಣಗಳು ವರದಿಯಾಗಿದ್ದನ್ನು ಗಮನಿಸಿ ಭಾರತ ಸರಕಾರವು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಎಸಗುವವರನ್ನು ಮತ್ತಷ್ಟೂ ಕಠಿಣವಾಗಿ ಶಿಕ್ಷಿಸುವ ಮೂಲಕ, ಮಕ್ಕಳ ಮೇಲಾಗುವ ದೌರ್ಜನ್ಯ ಹಲ್ಲೆಗಳನ್ನು ತಡೆಗಟ್ಟಲು "ಅಪರಾಧಿಕ ತಿದ್ದುಪಡಿ ಕಾಯ್ದೆ-2018"ನ್ನು ಜಾರಿಗೆ ತಂದಿದ್ದು, ಇದರನ್ವಯ 12 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ಹಲ್ಲೆ, ದೌರ್ಜನ್ಯ ಎಸಗಿದವರಿಗೆ, ಗಲ್ಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ಹಾಗೂ ದಂಡವನ್ನು ವಿಧಿಸಬಹುದಾಗಿದೆ.  16 ವರ್ಷದೊಳಗಿನ ಮಗುವಿನ ಮೇಲಿನ ಲೈಂಗಿಕ ಹಲ್ಲೆ, ದೌರ್ಜನ್ಯಕ್ಕೆ ಕನಿಷ್ಠ 20 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ಹಲ್ಲೆಗೆ 20 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.  

ಇಷ್ಟೂ ತೀವ್ರತರವಾದ ಕಾನೂನು ಜಾರಿಯಲ್ಲಿದ್ದರು ಸಹ, ಜಿಲ್ಲೆಯಲ್ಲಿ 6 ವರ್ಷದ ಮಗುವಿನ ಮೇಲೆಯು ಲೈಂಗಿಕ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ.  "ಅಪರಾಧಿಕ ತಿದ್ದುಪಡಿ ಕಾಯ್ದೆ-2018" ಕಾಯ್ದೆಯ ಕುರಿತು ಸಮುದಾಯದಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವ ಅತ್ಯವಶ್ಯಕವಾಗಿದ್ದು, ಈ ಬಗ್ಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ, ಮಕ್ಕಳ ಮೇಲಾಗುವ ಹಲ್ಲೆ ಮತ್ತು ದೌರ್ಜನ್ಯಗಳನ್ನು ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ರವರು ಹೇಳಿದರು.  

ಪ್ರೋಬೇಷನ ಐ.ಎ.ಎಸ್ ಅಧಿಕಾರಿ ನೇಹಾ ಜೈನರವರು ಮಾತನಾಡಿ,  ಭಾರತ ದೇಶವು "ಮಕ್ಕಳ ಹಕ್ಕುಗಳ ಒಡಂಬಡಿಕೆ"ಗೆ ಸಹಿ ಮಾಡಿದ್ದು, ದೇಶದ ಶೇ 40% ಜನಸಂಖ್ಯೆಯನ್ನು ಹೊಂದಿರುವ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅವರ ಹಕ್ಕುಗಳನ್ನು ಅನುಭವಿಸುವತಂಹ ಮಕ್ಕಳ ಸ್ನೇಹಿ ವಾತಾವರಣ ನಿಮರ್ಿಸಿ ಅವರ ಸರ್ವತೋಮುಖ ಅಭಿವೃದ್ಧಿಗೆ ಸಾಧಿಸಲು ನಾವುಗಳು ಪ್ರಾಮಾಣಿಕವಾಗಿ ಕಾರ್ಯನ್ಮೂಖವಾಗಬೇಕಿರುವದು ಅತೀ ಅವಶ್ಯವಾಗಿದೆ.  ಭಾರತ ಸರಕಾರವು ಮಕ್ಕಳ ಹಕ್ಕುಗಳ ಪರವಾದ ಹಲವಾರು ಕಾನೂನುಗಳನ್ನು ತಿದ್ದುಪಡಿ ಹಾಗೂ ಮರು ಅನುಷ್ಠಾನಗೊಳಿಸಿದೆ.  ಅವುಗಳಲ್ಲಿ ಪ್ರಮುಖವಾದದ್ದು, ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015, ಈ ಕಾಯ್ದೆಯು ಕಾನೂನಿನೊಡನೆ ಸಂಘರ್ಷದಲ್ಲಿರುವ, ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಪುನರವಸತಿ ಪ್ರಕ್ರಿಯೆಗಳ ಬಗ್ಗೆ ಹಾಗೂ ಮಕ್ಕಳ ಮೇಲೆನ ಹಲ್ಲೆ, ದೌರ್ಜನ್ಯ, ಕಿರುಕುಳ, ಕ್ರೌರ್ಯ, ಮಕ್ಕಳ ದರ್ುಬಳಕೆ ಮಾಡಿಕೊಳ್ಳುವವರನ್ನು ಶಿಕ್ಷಿಸಲು ಅವಕಾಶವನ್ನು ಕಲ್ಪಿಸಿದೆ ಎಂದರು.  

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖುಷಿ ಕುಶಾಲಪ್ಪರವರು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರಡಿ ವೈದ್ಯಕೀಯ ಪರೀಕ್ಷೆಗಳ ಮಹತ್ವದ ಬಗ್ಗೆ, ರೊವೀನಾ ಬಾಸ್ಟೀನ್ರವರು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಮತ್ತು ಇತ್ತೀಚಿನ ತಿದ್ದುಪಡಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.  ಯುನೆಸ್ಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಪೊಲೀಸ್ ಇಲಾಖೆಯ ಆರಕ್ಷಕ ವೃತ್ತ ನೀರಿಕ್ಷಕರು, ಆರಕ್ಷಕ ಉಪ-ನಿರೀಕ್ಷಕರು,  ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಬಾಲಮಂದಿರಗಳ ಅಧಿಕಾರಿಗಳು, ಬಾಲ ನ್ಯಾಯ ಮಂಡಳಿ ಸದಸ್ಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.