ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ
Sexual assault on minor: Convict sentenced to 30 years in prison
ಬೆಳಗಾವಿ 22: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾಲಯ, 30 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಸಿ ಬುಧವಾರ ಆದೇಶ ಹೊರಡಿಸಿದೆ.
ಬೆಳಗಾವಿ ಸಮರ್ಥ ನಗರದ ನಿಂಗಪ್ಪ ಹೊಸಮನಿ ಎಂಬಾತನೆ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ಅಪ್ರಾಪ್ತೆಯನ್ನು ಪುಸಲಾಯಿಸಿ 2022ರಲ್ಲಿ ತನ್ನ ಮನೆಗೆ ಕರೆದುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ 2024ರಲ್ಲಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಲಾಡ್ಜವೊಂದರಲ್ಲಿ ಅಕ್ರಮವಾಗಿ ಕೂಡಿಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ಮಾಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು, ಅಪರಾಧಿ ನಿಂಗಪ್ಪ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ು ಪ್ರಕಟಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಕಾರದಿಂದ 4 ಲಕ್ಷ ರೂ. ಪರಿಹಾರ ಪಡೆಯುವಂತೆ ಸೂಚಿಸಿದೆ. ಸರಕಾರದ ಪರವಾಗಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 