ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ವಿಷದಕರ ಸಂಗತಿ: ನ್ಯಾ.ರೇಣುಕಾದೇವಿ
ಹಾವೇರಿ20:ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಚಾಕಲೇಟ್, ಬಿಸ್ಕೇಟ್ ಹಾಗೂ ಮೊಬೈಲ್ ಇತರೆ ವಸ್ತುಗಳ ಆಮಿಷ್ ತೋರಿಸಿ ಅವರ ಸಂಬಂಧಿಕರು ಹಾಗೂ ಅಕ್ಕಪಕ್ಕದವರಿಂದ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ವಿಷಾಧಕರ ಸಂಗತಿ. ಹೆಣ್ಣು ಮಕ್ಕಳು ಇಂತಹ ಯಾವುದೇ ಆಮಿಷಗಳಿಗೆ ಒಳಗಾಗದೆ ತಮ್ಮನ್ನು ತಾವು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಸ್.ರೇಣುಕಾದೇವಿ ಅವರು ಹೇಳಿದರು.
ಮಂಗಳವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಕರ್ಾರೇತರ ಸಂಸ್ಥೆಗಳ ಆಶ್ರಯದಲ್ಲಿ ಲೈಂಗಿಕ ಹಲ್ಲೆಯಿಂದ ಚೇತರಿಸಿಕೊಂಡಿರುವ ಹಾಗೂ ಆಸಿಡ್ ದಾಳಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಯೋಜನೆ 2018, ನ್ಯಾಯ ಸಂಯೋಗ, ಮಕ್ಕಳ ಹುಕ್ಕುಗಳು ಹಾಗೂ ಬಾಲ ನ್ಯಾಯ ಕಾಯ್ದೆ 2015 ಕುರಿತು ಆಯೋಜಿಸಲಾದ ಜಿಲ್ಲಾ ಮಟ್ಟದ ಒಂದು ದಿನದ ಕಾನೂನು ಅರಿವು ನೆರವು ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ನಿಸಕಲ್ಮಶ ನಮಸ್ಸುಳ್ಳವರು, ಅವರಿಗೆ ಯಾವುದೇ ತರಹದ ಮೋಸ, ವಂಚನೆಗಳ ಅರಿವು ಇರುವುದಿಲ್ಲ. ಮಕ್ಕಳಿಗೆ ಮಕ್ಕಳ ಕಾನೂನುಗಳು ಹಾಗೂ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳಿಗೆ ಲೈಂಗಿಕ ದೌರ್ಜನ್ಯಗಳ ಕುರಿತು ಮಕ್ಕಳಿಗೆ ಅರಿವು ಇರಬೇಕು. ನಿಮ್ಮನ್ನು ಯಾರದು ತಮ್ಮ ಮನೆಯೊಳಗೆ ಕರೆದರೆ ಹೋಗಬಾರದು, ನಿಮ್ಮನ್ನು ಯಾವ ರೀತಿ ಸ್ಪಶರ್ಿಸುತ್ತಾರೆ ಎಂಬುದನ್ನು ಗಮನಿಸಬೇಕು. ಯಾರನ್ನೂ ನಂಬುವ ಕಾಲವಲ್ಲ ಹಾಗಾಗಿ ಹೆಣ್ಣು ಮಕ್ಕಳು ಆದಷ್ಟು ಜಾಗರೂಕತೆಯಿಂದ ಇರಬೇಕು. ನಿಮ್ಮ ತಂದೆ-ತಾಯಿಗಳಿಗೂ ಸಹ ಈ ಕಾನೂನುಗಳನ್ನು ಬಗ್ಗೆ ತಿಳಿಸಿ. ಇದು ಓದುವ ಸಮಯ, ಈ ಸಮಯದಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಓದಿನ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇತ್ತೀಚೆಗೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಲೈಂಗಿಕ ದೌಜ್ರ್ಯನ್ಯವನ್ನು ಗಂಭೀರವಾಗಿ ಪರಿಗಣಿಸಿ ಐದು ದಿನಗಳನ್ನು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರಪಡಿಸಲಾಗಿತು. ಕೇವಲ 75 ದಿನಗಳಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ ರೂ. ಒಂದು ಲಕ್ಷ ದಂವಿಧಿಸಿ ಐತಿಹಾಕ ತೀಪರ್ು ನೀಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು.
ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಮೋಟಾರು ವಾಹನ ಕಾಯ್ದೆ ಅನ್ವಯ 18 ವರ್ಷದ ತುಂದೆ ವಾಹನ ಚಾಲನೆ ಮಾಡಿದರೆ ನಿಮ್ಮ ತಂದೆ ತಾಯಿಗಳ ಮೇಲೆ ದೂರು ದಾಖಲಿಸಲಾಗುವುದು ಎಂದು ಮಕ್ಕಳಿಗೆ ಎಚ್ಚರಿಕೆ ನೀಡಿದರು.
" ಮೋಟಾರು ವಾಹನ ಕಾಯ್ದೆ ಅನ್ವಯ 18 ವರ್ಷ ತುಂಬದವರಿಗೆ ವಾಹನ ಚಾಲನೆ ಪರವಾನಿಗೆ ಇಲ್ಲ, ಹಾಗೆ ವಾಹನ ಓಡಿಸಿದರೆ ಖಂಡಿತ 18 ವರ್ಷ ತುಂಬುದುವುದಿಲ್ಲ ಎಂಬ ಚುಟುಕು ಕವನ ವಾಚಿಸುವ ಮೂಲಕ ಮಕ್ಕಳನ್ನು ನಗೆಗಡಲಲ್ಲಿ ತೇಲಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿಗಳಾದ ವೈ.ಎಲ್.ಲಾಡಖಾನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅನ್ಯಾಯವಾದವರಿಗೆ ನ್ಯಾಯ ಒದಗಿಸುವುದು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ. ಪ್ರತಿಯೊಬ್ಬರೂ ಕಾನೂನಿನ ಸಾಮಾನ್ಯಜ್ಞಾನ ಹೊಂದಬೇಕು ಹಾಗೂ ಕಾನೂನನ್ನು ಗೌರವಿಸಬೇಕು. ಸಮಾಜ ಹಾಗೂ ರಾಷ್ಟ್ರದ ಉನ್ನತಿಗೆ ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿನೋದ ಹೆಗ್ಗಳಗಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಪಿ.ಎಸ್.ಯಲಿಗಾರ, ಕಾರ್ಯದಶರ್ಿ ಪಿ.ಎಂ.ಬೆನ್ನೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಭಗವಂತಗೌಡ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಎಸ್.ಕೆ., ವಿನಯ ಗುಡಗೂರ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 