ಶಕ್ತಿ ಯೋಜನೆ: ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ
Shakti Yojana: Celebration at the bus stand
ಶಕ್ತಿ ಯೋಜನೆ: ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ
ಹಾನಗಲ್ 14: ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕಾ ಮಟ್ಟದ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಸಂಭ್ರಮಾಚರಣೆ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಬಸ್ಸಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇಲಾಖೆಗೆ ಹೆಚ್ಚು ಆದಾಯ ತಂದುಕೊಟ್ಟ ಮತ್ತು ನಿವೃತ್ತಿ ಹೊಂದಿದ ಚಾಲಕರು, ನಿರ್ವಾಹಕರನ್ನು ಸನ್ಮಾನಿಸಲಾಯಿತು.
ಬಸ್ಸಿನಲ್ಲಿ ಪ್ರಯಾಣಿಸಿದ ಶಾಸಕ ಶ್ರೀನಿವಾಸ ಮಾನೆ ಶಕ್ತಿ ಯೋಜನೆ ಮಹಿಳೆಯರ ಕನಸು ನನಸಾಗಿಸಿ, ನಿಜವಾದ ಅರ್ಥದಲ್ಲಿ ಅವರಿಗೆ ಶಕ್ತಿ ತುಂಬಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಆರಂಭಿಸಲಾದ ಈ ಯೋಜನೆಯಡಿ ಹಾನಗಲ್ ತಾಲೂಕಿನಲ್ಲಿ ಕಳೆದ 2 ವರ್ಷಗಳಲ್ಲಿ 2 ಕೋಟಿ 44 ಲಕ್ಷ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. 14 ಹೊಸ ಬಸ್‌ಗಳನ್ನು ಒದಗಿಸಲಾಗಿದೆ. ಹೊಸ ಮಾರ್ಗಗಳಲ್ಲಿ ಬಸ್ ಓಡಿಸಲಾಗುತ್ತಿದೆ. ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಮುಂತಾದ ಉದ್ದೇಶಗಳಿಗೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎನ್ನುವ ಉದ್ದೇಶದಿಂದ ಜಾರಿ ಮಾಡಲಾಗಿರುವ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷರಾದ ಯಲ್ಲಪ್ಪ ಕಿತ್ತೂರ, ನಾಗಪ್ಪ ಸವದತ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ ಜಮಾದಾರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಮುಖಂಡರಾದ ಈರಣ್ಣ ಬೈಲವಾಳ, ಭರಮಣ್ಣ ಶಿವೂರ, ಆದರ್ಶ ಶೆಟ್ಟಿ, ಶಿವು ತಳವಾರ, ಶಿವು ಭದ್ರಾವತಿ, ಮೇಕಾಜಿ ಕಲಾಲ, ಶಂಕರ ದೇಶಪಾಂಡೆ, ಇರ್ಫಾನ್ ಸೌದಾಗರ ಸೇರಿದಂತೆ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 