ಶಕ್ತಿ ಯೋಜನೆ:500 ಕೋಟಿ ಮಹಿಳಾ ಪ್ರಯಾಣಿಕರ ದಾಖಲೆ ಸಂಚಾರ
Shakti Yojana: Record movement of 500 crore women passengers
ಶಕ್ತಿ ಯೋಜನೆ:500 ಕೋಟಿ ಮಹಿಳಾ ಪ್ರಯಾಣಿಕರ ದಾಖಲೆ ಸಂಚಾರ
ಹಾವೇರಿ 14 : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರ ದಾಖಲೆಯ ಸಂಚಾರ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಅವರು ಚಾಲನೆ ನೀಡಿದರು.
ಹಾವೇರಿ ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಹಾಗೂ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಹಾಗೂ ನಿರ್ಮೂಲನೆ ಕುರಿತು ಆಯೋಜಿಸಲಾದ ಬೀದಿನಾಟಕಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ.ಮೈದೂರ ಗ್ಯಾರಂಟಿ ಸಮಿತಿ ಸದಸ್ಯರು, ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ, ಕೆಎಸ್‌ಆರ್‌ಟಿಸಿ ಡಿ.ಸಿ.ವಿಜಯಕುಮಾರ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 